May 17, 2026

ಪ್ರಧಾನಿ ನರೇಂದ್ರ ಮೋದಿ ಕಾರ್ಯಕ್ರಮದಲ್ಲಿ ಖಾಲಿ ಕುರ್ಚಿಗಳು: ಅಣಕಿಸಿದ ಕಾಂಗ್ರೆಸ್

0
image_editor_output_image-1080171216-1668256285339.jpg

ಬೆಂಗಳೂರು: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಿನ್ನೆ 108 ಅಡಿ ಎತ್ತರದ ಭವ್ಯ ಕೆಂಪೇಗೌಡ ಪ್ರತಿಮೆಯನ್ನು ಲೋಕಾರ್ಪಣೆಗೊಳಿಸಿದ ನಂತರ ಪ್ರಧಾನಿ ನರೇಂದ್ರ ಮೋದಿ ಜನರನ್ನುದ್ದೇಶಿಸಿ ಮಾತನಾಡಿದ್ದ ಕಾರ್ಯಕ್ರಮದ ವಿಡಿಯೋವೊಂದನ್ನು ಹಂಚಿಕೊಳ್ಳುವ ಮೂಲಕ ಕಾಂಗ್ರೆಸ್ ಬಿಜೆಪಿ ಕಾರ್ಯಕ್ರಮಕ್ಕೆ ಜನ ಸೇರುತ್ತಿಲ್ಲ ಎಂದು ಹೇಳಿದೆ.

ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಜನರಿಲ್ಲದೆ ಕುರ್ಚಿಗಳು ಖಾಲಿ ಖಾಲಿಯಾಗಿರುವ ವಿಡಿಯೋ ಹಂಚಿಕೊಂಡಿರುವ ರಾಜ್ಯ ಕಾಂಗ್ರೆಸ್, ಟ್ರಬಲ್ ಎಂಜಿನ್ ಸರ್ಕಾರದ ಮೇಲೆ ಜನಸಾಮಾನ್ಯರಷ್ಚೇ ಅಲ್ಲ, ಸ್ವತಃ ಬಿಜೆಪಿ ಕಾರ್ಯಕರ್ತರೇ ಬೇಸತ್ತಿದ್ದಾರೆ ಎಂದು ಟೀಕಿಸಿದೆ.

ಸ್ವತಃ ಬಿಜೆಪಿ ಕಾರ್ಯಕರ್ತರೇ ಬೇಸತ್ತಿದ್ದಾರೆ! ಜನಸಂಕಟಯಾತ್ರೆ ಯಲ್ಲಿ ಖಾಲಿ ಕುರ್ಚಿ ದರ್ಶನ ಪಡೆದ ಬಿಜೆಪಿ ಕರ್ನಾಟಕ ಪ್ರಧಾನಿ ಕರೆಸಿ ಚುನಾವಣಾ ತಯಾರಿ ಮಾಡಿದರೂ ಕುರ್ಚಿಗಳು ಖಾಲಿಯಾಗುತ್ತಿವೆ ಎಂದು ಅಣಕಿಸಿದೆ.

Leave a Reply

Your email address will not be published. Required fields are marked *

error: Content is protected !!