ನೆಲ್ಯಾಡಿ: ಕಬ್ಬಿಣದ ಸರಳು ಸಾಗಾಟದ ಲಾರಿ ಪಲ್ಟಿ: ಮಂಗಳೂರು- ಬೆಂಗಳೂರು ಹೆದ್ದಾರಿಯಲ್ಲಿ ಸಂಚಾರ ಅಸ್ತವ್ಯಸ್ತ
ಉಪ್ಪಿನಂಗಡಿ: ನೆಲ್ಯಾಡಿಯ ಹೊಸಮಜಲು ಎಂಬಲ್ಲಿ ಕಬ್ಬಿಣದ ಸರಳುಗಳನ್ನು ಹೇರಿಕೊಂಡು ಹೋಗುತ್ತಿದ್ದ ಟ್ರೈಲರ್ ಒಂದು ನಿಯಂತ್ರಣ ತಪ್ಪಿ ರಸ್ತೆಗೆ ಅಡ್ಡವಾಗಿ ಮಗುಚಿ ಬಿದ್ದ ಪರಿಣಾಮ ಕೆಲವೊತ್ತು ಹೆದ್ದಾರಿ ಸಂಚಾರಕ್ಕೆ ತಡೆಯಾದ ಘಟನೆ ಇಂದು ರಾತ್ರಿ ನಡೆದಿದೆ.
ಲಾರಿಯಲ್ಲಿದ್ದವರು ಅಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ.
ನೆಲ್ಯಾಡಿ ಹೊರಠಾಣೆ ಪೊಲೀಸರು ಘಟನಾ ಸ್ಥಳಕೆ ತೆರಳಿ ಲಾರಿ ತೆರವು ಕಾರ್ಯಾಚರಣೆ ನಡೆಸಿ, ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟರು.





