ಬಂಟ್ಟಾಳ: ಯುವಕ ಸಮದ್ ಕೊಲೆ ಪ್ರಕರಣ – ಆರೋಪಿಗೆ ನ್ಯಾಯಾಂಗ ಬಂಧನ
ಬಂಟ್ವಾಳ: ಯುವಕನನ್ನು ಕೊಲೆ ಮಾಡಿ ಸುಟ್ಟು ಹೊಂಡಕ್ಕೆ ಎಸೆದ ಆರೋಪಿ ಬೋಳಂತೂರು ನಿವಾಸಿ ಅಬ್ದುಲ್ ರಹಿಮಾನ್‌ನನ್ನು ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ.
ಆರೋಪಿಯು ಸುರಿಬೈಲು ನಿವಾಸಿ ಯುವಕ ಅಬ್ದುಲ್ ಸಮದ್(19) ನನ್ನು ಕೊಲೆ ಮಾಡಿ ಇರಾ ಮುಳೂರುಪದವಿನ ಗುಡ್ಡದಲ್ಲಿ ಸುಟ್ಟು ತೀರಾ ಆಳವಾದ ಹೊಂಡಕ್ಕೆ ಎಸೆದಿದ್ದನು.
ಕೊಲೆಯಾಗಿ ಏಳೆಂಟು ದಿನಗಳ ಬಳಿಕ ಮೃತದೇಹವನ್ನು ಹೊರ ತೆಗೆಯಲಾಗಿತ್ತು.
ಈ ಪ್ರಕರಣದ ತನಿಖೆಯನ್ನು ಬಂಟ್ವಾಳ ಗ್ರಾಮಾಂತರ ಪೊಲೀಸ್ ಇನ್‌ಸ್ಪೆಪೆಕ್ಟರ್ ಟಿ.ಡಿ. ನಾಗರಾಜ್ ಅವರು ನಡೆಸುತ್ತಿದ್ದಾರೆ.
ಪ್ರಾರಂಭದಲ್ಲಿ ಹೆಚ್ಚಿನ ತನಿಖೆಯ ದೃಷ್ಟಿಯಿಂದ ಆರೋಪಿಯನ್ನು ಪೊಲೀಸ್ ಕಸ್ಟಡಿಗೆ ಪಡೆದುಕೊಂಡಿದ್ದರು. ಯುವಕನನ್ನು ಕೊಲೆ ಮಾಡಿ ಸುಟ್ಟು ಹೊಂಡಕ್ಕೆ ಎಸೆದ ಆರೋಪಿ ಬೋಳಂತೂರು ನಿವಾಸಿ ಅಬ್ದುಲ್ ರಹಿಮಾನ್‌ನನ್ನು ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ.





