February 2, 2026

ಬೆಳ್ತಂಗಡಿ: ಮಹಿಳೆಯ ಕೈಕಾಲು ಕಟ್ಟಿಹಾಕಿ ಕಳವು: ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ದೋಚಿ ಎಸ್ಕೇಪ್

0
IMG-20221113-WA0009.jpg

ವೇಣೂರು: ಬೆಳ್ತಂಗಡಿ ತಾಲೂಕಿನ ನಾರಾವಿಯಲ್ಲಿ ನ.12 ರಂದು ಸಂಜೆ ಒಂಟಿ ಮಹಿಳೆ ಇರುವ ಮನೆಗೆ ಬಂದ ನಾಲ್ವರು ಮುಸುಕುದಾರಿಗಳು ಮಹಿಳೆಯ ಕೈಕಾಲು ಕಟ್ಟಿ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ದೋಚಿ ಪರಾರಿಯಾಗಿರುವ ಘಟನೆ ನಡೆದಿದೆ.

ಬೆಳ್ತಂಗಡಿ ತಾಲೂಕಿನ ನಾರಾವಿ ಸಮೀಪದ ಅರಸಿಕಟ್ಟೆಯ ಪ್ರಭಾವತಿ ನಾಯ್ಕ ಎಂಬವರ ಮನೆಗೆ ಏಕಾಏಕಿ ಬಂದ ಮುಸುಕುದಾರಿಗಳು ಅವರ ಬಾಯಿಗೆ ಬಟ್ಟೆ ತುರುಕಿಸಿ, ಹಗ್ಗದಿಂದ ಕೈಕಾಲನ್ನು ಕಟ್ಟಿ ಹಾಕಿ, ಕುತ್ತಿಗೆಯಲ್ಲಿದ್ದ ಚಿನ್ನದ ಸರ, ಕಿವಿಯಲ್ಲಿದ್ದ ಬೆಂಡೋಲೆಯನ್ನು ಬಲಾತ್ಕಾರವಾಗಿ ತೆಗೆದು ಬಳಿಕ ಮನೆಯೊಳಗಿದ್ದ 3 ಚಿನ್ನದ ಬಳೆಗಳು, 3 ಚಿನ್ನದ ಉಂಗುರಗಳು, ಚಿನ್ನದ ಚೈನ್ ಹಾಗೂ ಒಂದು ಮೊಬೈಲ್‌ನ್ನು ದೋಚಿ ಪರಾರಿಯಾಗಿದ್ದಾರೆ ಎನ್ನಲಾಗಿದೆ.

ಇನ್ನು ಆರೋಪಿಗಳು ದೋಚಿದ ಚಿನ್ನದ ಅಂದಾಜು ಮೌಲ್ಯ ಒಟ್ಟು ರೂ. 4,60,000 ಆಗಬಹುದೆಂದು ಅಂದಾಜಿಸಲಾಗಿದೆ.

ಸ್ಥಳಕ್ಕೆ ಭೇಟಿ ನೀಡಿರುವ ವೇಣೂರು ಠಾಣೆಯ ಪೊಲೀಸ್ ಉಪನಿರೀಕ್ಷಕಿ ಸೌಮ್ಯ ಜೆ. ಹಾಗೂ ಸಿಬ್ಬಂದಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.

Leave a Reply

Your email address will not be published. Required fields are marked *

error: Content is protected !!