September 20, 2024

ಬೆಳ್ತಂಗಡಿ: ನಿಯಂತ್ರಣ ತಪ್ಪಿ ಚರಂಡಿಗೆ ಬಿದ್ದ ಮಿನಿ ಟೆಂಪೋ: ಹಲವರಿಗೆ ಗಾಯ

0

ಬೆಳ್ತಂಗಡಿ: ಕೌಕ್ರಡಿ ಗ್ರಾಮದಲ್ಲಿ ಟೆಂಪೋವೊಂದು ರಸ್ತೆ ಬದಿಯ ಚರಂಡಿಗೆ ಬಿದ್ದು ಹಲವರಿಗೆ ಗಾಯವಾದ ಘಟನೆ ನಡೆದಿದೆ.

ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಯಾತ್ರಾರ್ಥಿಗಳಾಗಿ ಆಗಮಿಸಿ ನಂತರ ಕುಕ್ಕೆ ಸುಬ್ರಹ್ಮಣ್ಯ ದೇವಾಲಯಕ್ಕೆ ತೆರಳುತಿದ್ದ ಟೆಂಪೊವೊಂದು ಚಾಲಕನ ನಿಯಂತ್ರಣ ತಪ್ಪಿ ಕೊಕ್ಕಡ ಸಮೀಪದ ಕೌಕ್ರಾಡಿ ಗ್ರಾಮದ ಮೂಡುಬೈಲು ಎಂಬಲ್ಲಿ ಚರಂಡಿಗೆ ಬಿದ್ದಿದೆ.

ಈ ಪರಿಣಾಮ ವಾಹನದಲ್ಲಿದ್ದ ಸುಮಾರು 8 ಮಂದಿಗೆ ಗಾಯಗಳಾಗಿದ್ದು, ತಕ್ಷಣ ಸ್ಥಳೀಯರ ಸಹಕಾರದಿಂದ ಅವರನ್ನು ಕೊಕ್ಕಡದ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿದೆ. ಅಲ್ಲಿಂದ ಇಬ್ಬರನ್ನು ಹೆಚ್ಚಿನ ಚಿಕಿತ್ಸೆಗಾಗಿ ಉಜಿರೆ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿದೆ ಎಂದು ತಿಳಿದು ಬಂದಿದೆ.

Leave a Reply

Your email address will not be published. Required fields are marked *

error: Content is protected !!