March 20, 2026

ಐಸಿಸಿ ಟ್ವೆಂಟಿ-20: ವಿಶ್ವಕಪ್ ಕಿರೀಟ ಮುಡಿಗೇರಿಸಿಕೊಂಡ ಇಂಗ್ಲೆಂಡ್

0
image_editor_output_image-1951456149-1668340239251.jpg

ಮೆಲ್ಬರ್ನ್: ಐಸಿಸಿ ಟ್ವೆಂಟಿ-20 ವಿಶ್ವಕಪ್ ಟೂರ್ನಿಯಲ್ಲಿ ಭಾನುವಾರ ನಡೆದ ರೋಚಕ ಫೈನಲ್ ಪಂದ್ಯದಲ್ಲಿ ಪಾಕಿಸ್ತಾನ ವಿರುದ್ಧ ಐದು ವಿಕೆಟ್‌ ಅಂತರದ ಗೆಲುವು ದಾಖಲಿಸಿರುವ ಇಂಗ್ಲೆಂಡ್ ವಿಶ್ವಕಪ್ ಕಿರೀಟ ಮುಡಿಗೇರಿಸಿಕೊಂಡಿದೆ.

ಈ ಮೂಲಕ ಟ್ವೆಂಟಿ-20 ವಿಶ್ವಕಪ್ ಕ್ರಿಕೆಟ್ ಇತಿಹಾಸದಲ್ಲಿ ವೆಸ್ಟ್‌ಇಂಡೀಸ್ ಬಳಿಕ ಇಂಗ್ಲೆಂಡ್ ಎರಡನೇ ಬಾರಿಗೆ ವಿಶ್ವಕಪ್ ಗೆದ್ದ ಸಾಧನೆ ಮಾಡಿದೆ. ಈ ಹಿಂದೆ 2010ರಲ್ಲಿ ಆಸ್ಟ್ರೇಲಿಯಾ ಮಣಿಸಿದ್ದ ಇಂಗ್ಲೆಂಡ್ ಚಾಂಪಿಯನ್ ಎನಿಸಿಕೊಂಡಿತು.

ಮೆಲ್ಬರ್ನ್ ಕ್ರಿಕೆಟ್ ಮೈದಾನದಲ್ಲಿ ನಡೆದ ರೋಚಕ ಫೈನಲ್ ಪಂದ್ಯದಲ್ಲಿ ಪಾಕಿಸ್ತಾನ ಒಡ್ಡಿದ 138 ರನ್‌ಗಳ ಗೆಲುವಿನ ಗುರಿ ಬೆನ್ನಟ್ಟಿದ, ಇಂಗ್ಲೆಂಡ್ ಇನ್ನೂ ಆರು ಎಸೆತಗಳು ಬಾಕಿ ಉಳಿದಿರುವಂತೆಯೇ ಐದು ವಿಕೆಟ್ ನಷ್ಟಕ್ಕೆ ಗುರಿ ತಲುಪಿತು.

Leave a Reply

Your email address will not be published. Required fields are marked *

error: Content is protected !!