March 20, 2026

ಶಾಸಕ ಪ್ರಿಯಾಂಕ್ ಖರ್ಗೆಗೆ ಕೊಲೆ ಬೆದರಿಕೆ: ಬಿಜೆಪಿ ಮುಖಂಡನ ಬಂಧನ

0
image_editor_output_image-1204065348-1668402011024.jpg

ಕಲಬುರಗಿ: ಚಿತ್ತಾಪುರ ಶಾಸಕ ಪ್ರಿಯಾಂಕ್ ಖರ್ಗೆ ಯನ್ನ ಶೂಟ್ ಮಾಡುವುದಾಗಿ ಹೇಳಿಕೆ ನೀಡಿದ್ದ ಬಿಜೆಪಿ ಮುಖಂಡ ಮಣಿಕಂಠ ರಾಠೋಡ್ ನನ್ನು ಪೊಲೀಸರು ಬಂಧಿಸಿದ್ದಾರೆ.

ಮಣಿಕಂಠ ರಾಠೋಡ್ ಹೇಳಿಕೆ ಹಿನ್ನಲೆಯಲ್ಲಿ ಬ್ರಹ್ಮಪೂರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಐಪಿಸಿ ಸೆಕ್ಷನ್ 506 ಅಡಿಯಲ್ಲಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರು. ಅಲ್ಲದೆ ಮಣಿಕಂಠ ಬಂಧನಕ್ಕಾಗಿ ಪೊಲೀಸರು ಬಲೆ ಬೀಸಿದ್ದರು. ಭಾನುವಾರ ಮಧ್ಯರಾತ್ರಿ ಹೈದರಾಬಾದ್‌ ನಲ್ಲಿ ಪೊಲೀಸರು ಬಂಧಿಸಿ ಕಲಬುರಗಿಗೆ ಕರೆ ತಂದಿದ್ದಾರೆ.

Leave a Reply

Your email address will not be published. Required fields are marked *

error: Content is protected !!