February 3, 2026

ಮಂಗಳೂರು: ಖಾಸಗಿ ಬಸ್ ಗಳ ನಡುವೆ ಅಪಘಾತ: ಪ್ರಯಾಣಿಕರು ಗಾಯ

0
IMG-20221114-WA0006.jpg

ಮಂಗಳೂರು: ನಗರದ ಜ್ಯೋತಿ ವೃತ್ತದ ಬಳಿ ಖಾಸಗಿ ಬಸ್ ಗಳ ನಡುವೆ ಅಪಘಾತ ಸಂಭವಿಸಿದೆ. ನಗರದಿಂದ ಹೊರ ಹೋಗುವ ಒಂದು ಬಸ್ ನಗರಕ್ಕೆ ಪ್ರವೇಶಿಸುವ ಮತ್ತೊಂದು ಖಾಸಗಿ ಬಸ್ ಗಳ ನಡುವೆ ಅಪಘಾತವಾಗಿದ್ದು, ಪ್ರಯಾಣಿಕರು ಸಣ್ಣ ಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ.

ಸೋಮವಾರ ಬೆಳಗ್ಗೆ ಘಟನೆ ನಡೆದಿದ್ದು, ಜ್ಯೋತಿ ವೃತ್ತದ ಬಳಿ ಸಂಚಾರದಲಿ ವ್ಯತ್ಯಯ ಉಂಟಾಗಿತ್ತು. ಸಂಚಾರಿ ಠಾಣಾ ಪೊಲೀಸರು ಸುಗಮ ಸಂಚಾರಕ್ಕೆ ವ್ಯವಸ್ಥೆ ಕಲ್ಪಿಸಿದ್ದಾರೆ. ಇನ್ನು ವಿದ್ಯುತ್ ತಂತಿ ಹಾಗೂ ಕೇಬಲ್ ಗಳಿಗೂ ಹಾನಿಯಾಗಿದೆ ಎನ್ನುವ ಮಾಹಿತಿ ಸಿಕ್ಕಿದೆ.

Leave a Reply

Your email address will not be published. Required fields are marked *

error: Content is protected !!