September 20, 2024

ಗೆಳತಿಯ ಹತ್ಯೆ: ದೇಹವನ್ನು 35 ತುಂಡು ಮಾಡಿ ಬೇರೆ ಬೇರೆ ಪ್ರದೇಶಗಳಲ್ಲಿ ಹೂತು ಹಾಕಿದ ಯುವಕ

0

ನವದೆಹಲಿ: ತನ್ನೊಂದಿಗೆ ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಗೆಳತಿಯ ಹತ್ಯೆ ನಡೆಸಿ, ದೇಹವನ್ನು 35 ತುಂಡುಗಳನ್ನಾಗಿ ಮಾಡಿ, ಬೇರೆ ಬೇರೆ ಪ್ರದೇಶಗಳಲ್ಲಿ ದೇಹದ ಭಾಗಗಳನ್ನು ಹೂತು ಹಾಕಿರುವ ಭಯಾನಕ ಘಟನೆ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ನಡೆದಿದೆ.

ಈ ಅಮಾನುಷ ಕೃತ್ಯ ಎಸಗಿದ 5 ತಿಂಗಳ ಬಳಿಕ ಕೊಲೆಗಡುಕನನ್ನು ಪೊಲೀಸರು ಬಂಧಿಸಿದ್ದಾರೆ.

ಆರೋಪಿಯನ್ನು ಅಫ್ತಾಬ್ ಅಮೀನ್ ಪೂನವಾಲಾ ಎಂದು ಗುರುತಿಸಲಾಗಿದೆ. ಆತ ಹತ್ಯೆಗೀಡಾದ ಯುವತಿ ಶ್ರದ್ಧಾ (26) ಜೊತೆ ಲಿವ್ ಇನ್ ರಿಲೇಶನ್‌ನಲ್ಲಿ ಇದ್ದ.

ಯುವತಿ ತನಗೆ ಯಾವಾಗಲೂ ಮದುವೆಯಾಗುವಂತೆ ಪೀಡಿಸುತ್ತಿದ್ದಳು. ಈ ವಿಚಾರವಾಗಿ ಆಗಾಗ ಜಗಳವಾಗುತ್ತಿದ್ದರಿಂದ ಮೇ 18 ರಂದು ಆತ ಯುವತಿಯ ಕತ್ತು ಹಿಸುಕಿ ಕೊಲೆ ಮಾಡಿರುವುದಾಗಿ ಆರೋಪಿ ಬಹಿರಂಗಪಡಿಸಿದ್ದಾನೆ

Leave a Reply

Your email address will not be published. Required fields are marked *

error: Content is protected !!