March 20, 2026

ಕೊಡಗು: ಹಿಟ್ಟಿನ ಗಿರಣಿಯ ಬೆಲ್ಟ್‌ಗೆ ಸಿಲುಕಿದ ತಾಯಿಯನ್ನು ಸಮಯ ಪ್ರಜ್ಞೆಯಿಂದ ರಕ್ಷಿಸಿದ ಬಾಲಕ

0
image_editor_output_image1416145218-1668417031750.jpg

ಶನಿವಾರಸಂತೆ: ಹಿಟ್ಟಿನ ಗಿರಣಿಯ ಬೆಲ್ಟ್‌ಗೆ ಸಿಲುಕಿದ ತಾಯಿಯನ್ನು ಸಮಯ ಪ್ರಜ್ಞೆಯಿಂದ ರಕ್ಷಿಸಿ ಬುದ್ಧಿವಂತಿಕೆ ಮೆರೆದ ಸಮೀಪದ ಕೂಡ್ಲೂರು ಗ್ರಾಮದ ಕೆ.ಆರ್.ದೀಕ್ಷಿತ್‌ ಇತರ ಮಕ್ಕಳಿಗೆ ಮಾದರಿ.

ವರ್ಷದ ಹಿಂದೆ ಕೂಡ್ಲೂರು ಗ್ರಾಮದ ಮನೆಯಲ್ಲಿ ಚಾಲನೆಯಲ್ಲಿದ್ದ ಹಿಟ್ಟಿನ ಗಿರಣಿಯ ಬೆಲ್ಟ್‌ಗೆ ತಾಯಿ ಅರ್ಪಿತಾ ಅವರ ತಲೆಕೂದಲು ಸಿಲುಕಿಕೊಂಡು ಆಕೆ ಜೋರಾಗಿ ಕೂಗಿಕೊಂಡರು. ತಾಯಿ ಕೂಗು ಕೇಳಿ ದೂರದಲ್ಲಿ ಆಟವಾಡುತ್ತಿದ್ದ ಪುತ್ರ ದೀಕ್ಷಿತ್ ಓಡಿ ಬಂದು ಗಿರಣಿಯ ವಿದ್ಯುತ್ ಸ್ವಿಚ್ ಆಫ್ ಮಾಡುವ ಮೂಲಕ ತಾಯಿ ಪ್ರಾಣವನ್ನು ಉಳಿಸಿದ್ದ.

ಪ್ರಸ್ತುತ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ 3ನೇ ತರಗತಿ ಓದುತ್ತಿರುವ ದೀಕ್ಷಿತ್ ಓದಿನಲ್ಲೂ ಮುಂದು. ರವಿಕುಮಾರ್– ಅರ್ಪಿತಾ ದಂಪತಿಗೆ ಗಿರಣಿಯ ಬಗ್ಗೆ, ವಿದ್ಯುತ್ ಬಗ್ಗೆ ಏನೂ ತಿಳಿಯದ ಮಗನ ಸಾಹಸ ಹಾಗೂ ಸಮಯ ಪ್ರಜ್ಞೆ ಬಗ್ಗೆ ಬಹಳ ಹೆಮ್ಮೆ. ಬಾಲಕನ ಸಮಯಪ್ರಜ್ಞೆಯನ್ನು ಪರಿಗಣಿಸಿದ ಸರ್ಕಾರ ಆತನಿಗೆ 2021–22ನೇ
ಸಾಲಿನಲ್ಲಿ ‘ಹೊಯ್ಸಳ ಶೌರ್ಯ ಪ್ರಶಸ್ತಿ’ ನೀಡಿ ಗೌರವಿಸಿತು.

Leave a Reply

Your email address will not be published. Required fields are marked *

error: Content is protected !!