ಕಂದಕಕ್ಕೆ ಉರುಳಿಬಿದ್ದ ವಾಹನ: ಮೂವರು ಸರ್ಕಾರಿ ಅಧಿಕಾರಿಗಳು ಸಾವು
ಭದರ್ವಾ/ಜಮ್ಮು: ಜಮ್ಮು ಮತ್ತು ಕಾಶ್ಮೀರದ ದೋಡಾ ಜಿಲ್ಲೆಯಲ್ಲಿ ಕಂದಕಕ್ಕೆ ವಾಹನ ಉರುಳಿಬಿದ್ದ ಪರಿಣಾಮ ಮೂವರು ಸರ್ಕಾರಿ ಅಧಿಕಾರಿಗಳು ಸಾವನ್ನಪ್ಪಿ, ಒಬ್ಬರಿಗೆ ಗಂಭೀರವಾಗಿ ಗಾಯವಾಗಿರುವ ಘಟನೆ ಸೋಮವಾರ ನಡೆದಿದೆ.
ದೋಡಾ ಜಿಲ್ಲೆಯ ಆರ್ & ಬಿ ಕಾರ್ಯನಿರ್ವಾಹಕ ಇಂಜಿನಿಯರ್, ಎಇಇ ಮತ್ತು ಸೂಪರಿಂಟೆಂಡಿಂಗ್ ಎಂಜಿನಿಯರ್ ರನ್ನು ಹೊತ್ತೊಯ್ಯುತ್ತಿದ್ದ ವಾಹನ -ಕಿಶ್ತ್ವಾರ್ ರಾಷ್ಟ್ರೀಯ ಹೆದ್ದಾರಿಯ ಅಸ್ಸಾರ್ ಬಳಿ ಬೆಳಿಗ್ಗೆ 10.45ರ ಸುಮಾರಿಗೆ ಕಂದಕಕ್ಕೆ ಉರುಳಿ ಬಿದ್ದಿದೆ ಎಂದು ಸ್ಥಳೀಯ ಠಾಣಾಧಿಕಾರಿ ಭುವಿಂದರ್ ಕೊತ್ವಾಲ್ ಅವರು ಮಾಹಿತಿ ನೀಡಿದ್ದಾರೆ.




