August 13, 2026

ಮಂಗಳೂರು: ಸುರತ್ಕಲ್ ಟೋಲ್ ಸಂಗ್ರಹ ರದ್ದು: ಅನಿರ್ದಿಷ್ಟಾವಧಿ ಹೋರಾಟಕ್ಕೆ ಜಯ

0
IMG-20221114-WA0020.jpg

ಮಂಗಳೂರು: ಕಳೆದ ಹಲವು ತಿಂಗಳಿಂದ ಭಾರೀ ವಿವಾದಕ್ಕೆ ಕಾರಣವಾಗಿದ್ದ ಸುರತ್ಕಲ್ ಟೋಲ್‌ಗೇಟ್ ವಿರುದ್ಧ ಟೋಲ್‌ ವಿರೋಧಿ ಹೋರಾಟ ಸಮಿತಿ ಅನಿರ್ದಿಷ್ಟಾವಧಿ ಹೋರಾಟ ನಡೆಸುತ್ತಿದ್ದು ಇದೀಗ ಟೋಲ್ ಸಂಗ್ರಹ ರದ್ದುಪಡಿಸಿರುವುದರ ಬಗ್ಗೆ ಸಂಸದ ನಳಿನ್ ಕುಮಾರ್ ಕಟೀಲ್ ಟ್ವೀಟ್ ಮಾಡಿದ್ದಾರೆ.

ಮಂಗಳೂರಿನ ಸುರತ್ಕಲ್ ಸಮೀಪದ ಟೋಲ್ ಸಂಗ್ರಹ ಕೇಂದ್ರ ರದ್ದಾಗಿದ್ದು, ನಮ್ಮ ಮನವಿಗೆ ಸೂಕ್ತವಾಗಿ ಸ್ಪಂದಿಸಿದ ಕೇಂದ್ರ ಸಚಿವರಾದ ನಿತಿನ್ ಗಡ್ಕರಿ ಹಾಗೂ ಪ್ರಧಾನಿ ಮೋದಿ ಅವರಿಗೆ ನಾಗರಿಕರ ಪರವಾಗಿ ಧನ್ಯವಾದಗಳು ಎಂದು ತಿಳಿಸಿದ್ದಾರೆ.

ಟೋಲ್ ರದ್ದು ಮಾಡುವ ಭರವಸೆಯನ್ನು ಈ ಮೊದಲೇ ಕೇಂದ್ರ ಸಚಿವರು ನೀಡಿದ್ದು ಈಗ ತಾಂತ್ರಿಕ ಅಂಶ ಪೂರೈಸಲಾಗಿದೆ.

ಈ ಬಗ್ಗೆ ಪ್ರತಿಕ್ರಿಯಿಸಿರುವ ಟೋಲ್ ವಿರೋಧಿ ಹೋರಾಟ ಸಮಿತಿ ಟೋಲ್ ರದ್ದು ಮಾಡಿರುವುದರ ಬಗ್ಗೆ ಅಧಿಕೃತ ಮಾಹಿತಿ ಬಂದು ಟೋಲ್ ತೆರವು ಮಾಡುವವರೆಗೂ ನಾವು ಅನಿರ್ದಿಷ್ಟಾವಧಿ ಅಹೋರಾತ್ರಿ ಪ್ರತಿಭಟನೆಯನ್ನು ಮುಂದುವರೆಸುತ್ತೇವೆ ಎಂದು ಹೇಳಿದ್ದಾರೆ.

Leave a Reply

Your email address will not be published. Required fields are marked *

You may have missed

error: Content is protected !!