December 19, 2025

ಬಿಜೆಪಿ ಪಕ್ಷವನ್ನು ತೊರೆದ ಬಂಗಾಳದ ನಟಿ

0
Screenshot_2021-11-12-14-43-06-52_680d03679600f7af0b4c700c6b270fe7.jpg

ಕೊಲ್ಕತ್ತಾ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೂ ಮುನ್ನ ಬಿಜೆಪಿ ಸೇರಿ, ಟಿಎಂಸಿ ಅಭ್ಯರ್ಥಿ ಪಾರ್ಥ ಚಟರ್ಜಿ ವಿರುದ್ಧ ಸೋತಿದ್ದ ಬಂಗಾಳದ ನಟಿ ಶ್ರಬಂತಿ ಚಟರ್ಜಿ ಗುರುವಾರ ಪಕ್ಷವನ್ನು ತೊರೆದಿದ್ದಾರೆ.

ಪಶ್ಚಿಮ ಬಂಗಾಳವನ್ನು ಪ್ರಗತಿಯತ್ತ ಕೊಂಡೊಯ್ಯುವಲ್ಲಿ ಪಕ್ಷದಲ್ಲಿ ಪ್ರಾಮಾಣಿಕತೆ ಮತ್ತು ಉಪಕ್ರಮದ ಕೊರತೆಯ ಕಾರಣದಿಂದ ಪಕ್ಷ ತೊರೆಯುತ್ತಿರುವುದಾಗಿ ಅವರು ಹೇಳಿದ್ದಾರೆ.

ಭಾರೀ ಪ್ರಚಾರದ ಹೊರತಾಗಿಯೂ ಪಶ್ಚಿಮ ಬಂಗಾಳದಲ್ಲಿ ಮಮತಾ ಬ್ಯಾನರ್ಜಿ ಸರ್ಕಾರವನ್ನು ಅಧಿಕಾರದಿಂದ ದೂರವಿಡುವಲ್ಲಿ ವಿಫಲವಾದ ನಂತರ 34 ವರ್ಷದ ನಟಿ ಶ್ರಬಂತಿ ಬಿಜೆಪಿ ಪಕ್ಷದಿಂದ ಅಂತರವನ್ನು ಕಾಯ್ದುಕೊಂಡಿದ್ದರು.

ಕಳೆದ ಚುನಾವಣೆಯಲ್ಲಿ ನಾನು ಸ್ಪರ್ಧಿಸಿದ್ದ ಬಿಜೆಪಿಯೊಂದಿಗಿನ ಎಲ್ಲಾ ಸಂಬಂಧಗಳನ್ನು ಕಡಿದುಕೊಂಡಿದ್ದೇನೆ. ಬಂಗಾಳವನ್ನು ಪ್ರಗತಿಯತ್ತ ಕೊಂಡೊಯ್ಯುವಲ್ಲಿ ಅವರಲ್ಲಿನ ಪ್ರಾಮಾಣಿಕತೆ ಮತ್ತು ಉಪ ಕ್ರಮದ ಕೊರತೆಯೇ ತಮ್ಮ ರಾಜೀನಾಮೆಗೆ ಕಾರಣ ಎಂದು ಅವರು ಟ್ವೀಟ್ ಮಾಡಿದ್ದಾರೆ.

Leave a Reply

Your email address will not be published. Required fields are marked *

You may have missed

error: Content is protected !!