March 20, 2026

ನೇತಾಜಿ ಜನ್ಮದಿನವನ್ನು ‘ರಾಷ್ಟ್ರೀಯ ರಜೆ’ ಎಂದು ಘೋಷಿಸಲು ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ

0
IMG-20221114-WA0025.jpg

ನವದೆಹಲಿ: ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಜನ್ಮದಿನವನ್ನು ರಾಷ್ಟ್ರೀಯ ರಜಾದಿನವನ್ನಾಗಿ ಘೋಷಿಸಲು ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ ಎಂದು ತಿಳಿದು ಬಂದಿದೆ.

ಭಾರತದ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಮತ್ತು ನ್ಯಾಯಮೂರ್ತಿ ಜೆಬಿ ಪಾರ್ದಿವಾಲಾ ಅವರ ಪೀಠವು ಈ ಮನವಿಯನ್ನು ತಿರಸ್ಕರಿಸಿದ್ದು, ಭಾರತ ಸರ್ಕಾರವು ಇದನ್ನು ನಿರ್ಧರಿಸುವ ವಿಷಯವಾಗಿದೆ ಎಂದು ಸುಪ್ರೀಂ ಹೇಳಿದೆ.

ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಜನ್ಮದಿನವಾದ ಜನವರಿ 23 ಅನ್ನು ರಾಷ್ಟ್ರೀಯ ರಜಾದಿನವಾಗಿ ಘೋಷಿಸಲು ನಿರ್ದೇಶನ ನೀಡುವಂತೆ ಕೋರಿ ವಕೀಲ ಕೆಕೆ ರಮೇಶ್ ಅವರು ಪಿಐಎಲ್ ಸಲ್ಲಿಸಿದ್ದರು.

Leave a Reply

Your email address will not be published. Required fields are marked *

error: Content is protected !!