ಮನೆ ನಿರ್ಮಾಣಕ್ಕೆ ವರ್ಕ್ ಆರ್ಡರ್ ಗಾಗಿ 20 ಸಾವಿರ ರೂ. ಲಂಚ: ಲೋಕಾಯುಕ್ತ ಬಲೆಗೆ ಬಿದ್ದ ಪಿಡಿಒ
ಹಾವೇರಿ: ಮನೆ ನಿರ್ಮಾಣಕ್ಕೆ ವರ್ಕ್ ಆರ್ಡರ್ ನೀಡಲು 20 ಸಾವಿರ ರೂಪಾಯಿ ಲಂಚ ಪಡೆಯುತ್ತಿದ್ದ ವೇಳೆ ಪಿಡಿಒ ಲೋಕಾಯುಕ್ತ ಬಲೆಗೆ ಬಿದ್ದಿರುವ ಘಟನೆ ಹಾವೇರಿ ಜಿಲ್ಲೆಯಲ್ಲಿ ನಡೆದಿದೆ.
ಶಿಗ್ಗಾಂವಿ ತಾಲ್ಲೂಕಿನ ನಾರಾಯಣಪುರದ ಗ್ರಾಮ ಪಂಚಾಯಿತಿ ಪಿಡಿಒ ಈರಣ್ಣ ಗಾಣಿಗಿ, ಪಂಚಾಯಿತಿ ವ್ಯಾಪ್ತಿಯ ಮುನವಳ್ಳಿ ಗ್ರಾಮದ ಸಂಗಪ್ಪ ಕಿವುಡನ ಅವರಿಂದ ಹಣ ಪಡೆಯುತ್ತಿದ್ದ ವೇಳೆ ಲೋಕಾಯುಕ್ತ ಬಲೆಗೆ ಬಿದಿದ್ದಾರೆ.




