ಶಾಲೆಗಳಿಗೆ ಕೇಸರಿ ಬಣ್ಣ ಬಳಸಿದರೆ ತಪ್ಪೇನಿದೆ?: ಬಸವರಾಜ ಬೊಮ್ಮಾಯಿ
ಬೆಂಗಳೂರು/ಕಲಬುರಗಿ: ‘ಶಾಲಾ ಕೊಠಡಿಗಳಿಗೆ ಕೇಸರಿ ಬಣ್ಣ ಬಳಸಿದರೆ ತಪ್ಪೇನಿದೆ’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರಶ್ನಿಸಿದರು.
ಕಲಬುರಗಿ ತಾಲ್ಲೂಕಿನ ಮಡಿಯಾಳ ತಾಂಡಾದಲ್ಲಿ ಸೋಮವಾರ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ‘ವಿವೇಕ’ ಶಾಲಾ ಕೊಠಡಿಗಳ ಯೋಜನೆಗೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದ ಅವರು, ‘ಸ್ವಾಮಿ ವಿವೇಕಾನಂದರು ಸನ್ಯಾಸಿ. ಜಗತ್ತಿಗೆ ವಿವೇಕ ನೀಡಿದವರು. ಅವರನ್ನು ಪ್ರೇರಣೆಯಾಗಿ ಇಟ್ಟುಕೊಂಡು ಉತ್ತಮ ವಾತಾವರಣ ಕಲ್ಪಿಸಲು ಈ ಪರಿಕಲ್ಪನೆ ರೂಪಿಸಲಾಗಿದೆ’ ಎಂದರು.




