March 20, 2026

ಯುವತಿಯನ್ನು ಮಾತನಾಡಿಸಿದ್ದಕ್ಕೆ ವಿದ್ಯಾರ್ಥಿಯ ಅಪಹರಣ: ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಹಲ್ಲೆ

0
image_editor_output_image1666603517-1668524897190.jpg

ಹುಬ್ಬಳ್ಳಿ: ಯುವತಿಯನ್ನು ಮಾತನಾಡಿಸಿದ್ದಕ್ಕೆ ವಿದ್ಯಾರ್ಥಿಯನ್ನು ಅಪಹರಣ ಮಾಡಿ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ನಾಲ್ವರು ಹಲ್ಲೆ ನಡೆಸಿರುವ ಘಟನೆ ಹುಬ್ಬಳ್ಳಿಯ ಹೊರವಲಯದಲ್ಲಿ ನಡೆದಿದೆ.

ಹುಬ್ಬಳ್ಳಿ ಗೋಕುಲ ರೋಡ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರ ಪೈಕಿ ಇಬ್ಬರನ್ನು ಬಂಧಿಸಲಾಗಿದೆ.

ಕೇಶ್ವಾಪುರ ತಳವಾರ ಓಣಿಯ ಮಹಮ್ಮದ್ ಗೌಸ್, ಶಬರಿನಗರದ ಸೋಹೆಲ್ ಬಂಧಿತರು. ಪ್ರಕರಣದಲ್ಲಿ ಭಾಗಿಯಾಗಿದ್ದ ಪ್ರತೀಕ್ ಮತ್ತು ಸೌರಭ್ ಸದ್ಯ ಎಸ್ಕೇಪ್ ಆಗಿದ್ದಾರೆ.

Leave a Reply

Your email address will not be published. Required fields are marked *

error: Content is protected !!