March 21, 2026

ಆಝಾನ್‌ಗೆ ನೃತ್ಯ ಮಾಡಿದ ಮಕ್ಕಳು: ಸಂಘಪರಿವಾರ ಆಕ್ಷೇಪ, ಕ್ಷಮೆ ಕೋರಿದ ಆಡಳಿತ ಮಂಡಳಿ

0
image_editor_output_image-258541661-1668588904481.jpg

ಉಡುಪಿ: ಕುಂದಾಪುರ ತಾಲೂಕಿನ ಖಾಸಗಿ ಶಾಲೆಯ ಕ್ರೀಡಾಕೂಟದಲ್ಲಿ ವಿದ್ಯಾರ್ಥಿಗಳು ಆಜಾನ್‌ಗೆ ನೃತ್ಯ ಮಾಡಿದ್ದಕ್ಕೆ ಸಂಘಪರಿವಾರ ಆಕ್ಷೇಪ ವ್ಯಕ್ತವಾದ ಬೆನ್ನಲ್ಲೇ ಆಡಳಿತ ಮಂಡಳಿ ಕ್ಷಮೆ ಕೋರಿದೆ.

ಶಂಕರನಾರಾಯಣದ ಮದರ್ ಥೆರೆಸಾ ಮೆಮೋರಿಯಲ್ ಶಾಲೆ ಕುಂದಾಪುರ ವಲಯ ಮಟ್ಟದ ಪ್ರಾಥಮಿಕ ಮತ್ತು ಪ್ರೌಢ ಶಾಲೆಯ ಕ್ರೀಡಾಕೂಟ ಆಯೋಜಿಸಿದೆ. ಉದ್ಘಾಟನಾ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಮಾಡಿದ ಸ್ವಾಗತ ನೃತ್ಯ ಚರ್ಚೆಗೆ ಕಾರಣವಾಯ್ತು.

ಸ್ವಾಗತ ನೃತ್ಯದಲ್ಲಿ ಹಿಂದೂ, ಕ್ರೈಸ್ತ, ಇಸ್ಲಾಂ ಹಾಡುಗಳಿಗೆ ವಿದ್ಯಾರ್ಥಿನಿಯರಿಂದ ನೃತ್ಯ ನಡೆದಿದೆ. ಅಲ್ಲಾಹು ಅಕ್ಬರ್‌ಗೆ (ಆಜಾನ್) ವಿದ್ಯಾರ್ಥಿಗಳು ನೃತ್ಯ ಮಾಡಿದ್ದಕ್ಕೆ ಸ್ಥಳದಲ್ಲೇ ಆಕ್ಷೇಪ ವ್ಯಕ್ತವಾಯಿತು. ವೇದಿಕೆಯಲ್ಲಿದ್ದ ಸ್ಥಳೀಯ ಬಿಜೆಪಿ ಮುಖಂಡ ಖಂಡನೆ ಮಾಡಿದರು.

ಯಾರದ್ದೂ ಭಾವನೆಯನ್ನು ಘಾಸಿಗೊಳಿಸುವ ಉದ್ದೇಶ ನಮ್ಮದಾಗಿರಲಿಲ್ಲ. ಹಿಂದೂಗಳ ಭಾವನೆಗೆ ಧಕ್ಕೆ ಉಂಟಾಗಿದ್ದರೆ ಕ್ಷಮೆಯಾಚಿಸುತ್ತೇವೆ ಎಂದು ಶಾಲಾ ಆಡಳಿತ ಮಂಡಳಿಯ ಮುಖ್ಯಸ್ಥರು ವಿಷಾದ ವ್ಯಕ್ತಪಡಿಸಿದರು.

Leave a Reply

Your email address will not be published. Required fields are marked *

error: Content is protected !!