March 26, 2026

ಮಂಗಳೂರು: ನಿಲ್ಲಿಸಿದ್ದ ಕಾರಿನಲ್ಲಿ ಮೃತದೇಹ ಪತ್ತೆ

0
image_editor_output_image-1569798475-1636713511822

ಮಂಗಳೂರು: ನಗರದ ಕಂಕನಾಡಿ ಬಳಿ ನಿಲ್ಲಿಸಿದ ಕಾರಿನಲ್ಲಿ 44 ವರ್ಷದ ವ್ಯಕ್ತಿಯೊಬ್ಬರ ಮೃತದೇಹ ನವೆಂಬರ್ ಪತ್ತೆಯಾಗಿದೆ.

ಪೊಲೀಸರ ಮಾಹಿತಿ ಪ್ರಕಾರ, ಮೃತ ವ್ಯಕ್ತಿಯನ್ನು ಪ್ರಶಾಂತ್ ಕೊಟ್ಟಾರಿ ಎಂದು ಗುರುತಿಸಲಾಗಿದೆ. ಮೃತರು ಬರ್ಕೆ ಠಾಣೆ ವ್ಯಾಪ್ತಿಯ ಮಣ್ಣಗುಡ್ಡೆಯಲ್ಲಿ ವಾಸವಿದ್ದರು ಎಂದು ತಿಳಿದು ಬಂದಿದೆ. ಸಾವಿಗೆ ಕಾರಣ ಇನ್ನೂ ಖಚಿತವಾಗಿಲ್ಲ.
ಗುರುವಾರ ರಾತ್ರಿಯಿಂದಲೇ ಕಾರು ಅದೇ ಸ್ಥಳದಲ್ಲಿ ಪಾರ್ಕಿಂಗ್ ಮಾಡಲಾಗಿತ್ತು ಎಂದು ಸಾರ್ವಜನಿಕರು ತಿಳಿಸಿದ್ದು, ಇಂದು ಮಧ್ಯಾಹ್ನದವರೆಗೆ ಕಾರು ಅದೇ ಸ್ಥಳದಲ್ಲಿ ನಿಂತಿರುವುದು ಅನುಮಾನ ಬಂದು ಪರಿಶೀಲಿಸಿದಾಗ ಕಾರಿನೊಳಗೆ ವ್ಯಕ್ತಿಯೊಬ್ಬರು ಬಿದ್ದಿರುವುದು ಕಂಡುಬಂದಿತ್ತು. ಪೊಲೀಸರು ಸ್ಥಳಕ್ಕೆ ಅಗಮಿಸಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ.

Leave a Reply

Your email address will not be published. Required fields are marked *

error: Content is protected !!