ಕಾಂಗ್ರೆಸ್ ಮುಖಂಡ ಬಿಜೆಪಿ ಸೇರ್ಪಡೆ
ಕಲಬುರಗಿ: ಜಿಲ್ಲಾ ಕೋಲಿ ಸಮಾಜದ ಅಧ್ಯಕ್ಷ ಕಾಂಗ್ರೆಸ್ ಮುಖಂಡ ರವಿರಾಜ ಕೊರವಿ ಮತ್ತೆ ಬಿಜೆಪಿ ಸೇರಿದ್ದಾರೆ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಮ್ಮುಖದಲ್ಲಿ ರವಿರಾಜ ಕೊರವಿ ಬುಧವಾರ ಬಿಜೆಪಿ ಸೇರ್ಪಡೆಯಾಗಿದ್ದಾರೆ. ಈ ಮೂಲಕ ಕಾಂಗ್ರೆಸ್ ಪಕ್ಷದ ಪ್ರಮುಖ ವಿಕೆಟ್ ಪತನವಾಗಿದೆ.
ಕಲಬುರಗಿ ಸಂಸದ ಡಾ. ಉಮೇಶ ಜಾಧವ, ಜಿಲ್ಲಾ ಉಸ್ತುವಾರಿ ಸಚಿವ ಮುರುಗೇಶ ನಿರಾಣಿ, ಸೇಡಂ ಶಾಸಕ ರಾಜಕುಮಾರ ಪಾಟೀಲ ತೇಲ್ಕೂರ, ವಿಧಾನ ಪರಿಷತ್ ಸದಸ್ಯ ಎನ್. ರವಿಕುಮಾರ್ ಈ ಸಂದರ್ಭದಲ್ಲಿ ಇದ್ದರು.
2016ರಲ್ಲಿ ನಡೆದ ಜಿ.ಪಂ ಚುನಾವಣೆಯಲ್ಲಿ ಕೋಡ್ಲಿ ಕ್ಷೇತ್ರದಿಂದ ಪಕ್ಷೇತರರಾಗಿ ಸ್ಪರ್ಧಿಸಿ ಕೆಲವೇ ಮತಗಳ ಅಂತರದಿಂದ ಬಿಜೆಪಿ ಅಭ್ಯರ್ಥಿ ರಾಮಲಿಂಗಾರೆಡ್ಡಿ ದೇಶಮುಖ ಎದುರು ಪರಾಭವಗೊಂಡಿದ್ದರು.




