May 17, 2026

ಕಲಾವಿದರ ಸಂಘದ ಕಾರ್ಯದರ್ಶಿ ಅಶ್ಲೀಲ ವಿಡಿಯೋ ಕಳುಹಿಸುತ್ತಾರೆ: ನಟಿ ರಾಣಿ ಆರೋಪ

0
image_editor_output_image496544437-1668672751282.jpg

ಬೆಂಗಳೂರು: ಕರ್ನಾಟಕ ಪೋಷಕ ಕಲಾವಿದರ ಸಂಘದ ಭಿನ್ನಾಭಿಪ್ರಾಯ ಇದೀಗ ಬೀದಿಗೆ ಬಂದಿದೆ. ಪೋಷಕ ಕಲಾವಿದರ ಸಂಘದ ಅಧ್ಯಕ್ಷ ಮತ್ತು ಕಾರ್ಯದರ್ಶಿಯ ನಡೆಗೆ ಸಿನಿಮಾ ಹಾಗೂ ಕಿರುತೆರೆ ನಟಿ ರಾಣಿ ಹಲವು ಗಂಭೀರ ಆರೋಪಗಳನ್ನು ಮಾಡಿದ್ದಾರೆ.

ಹಣಕಾಸಿನ ಅವ್ಯವಹಾರದ ಜೊತೆ ಮಹಿಳೆಯರಿಗೆ ಸಂಘದಲ್ಲಿರುವವರು ಅಶ್ಲೀಲ ವಿಡಿಯೋಗಳನ್ನು ಕಳುಹಿಸುತ್ತಿದ್ದರು ಎಂದು ಗುರುತರ ಆರೋಪ ಮಾಡಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ನಟಿ ರಾಣಿ, ‘ ಸಂಘದ ಅಧ್ಯಕ್ಷ ಡಿಂಗ್ರಿ ನಾಗರಾಜ್ ಮತ್ತು ಪ್ರಧಾನ ಕಾರ್ಯದರ್ಶಿ ಆಡುಗೋಡಿ ಶ್ರೀನಿವಾಸ್ ಮೇಲೆ ಆರೋಪ ಮಾಡಿದ್ದು, ತಮ್ಮದು ಪೋಷಕ ಕಲಾವಿದರ ಸಂಘದ ಮೇಲೆ ಆರೋಪ ಮಾಡುವುದಿಲ್ಲ’ ಎಂದಿದ್ದಾರೆ.

ಮಹಿಳೆಯರನ್ನು ಅಗೌರವದಿಂದ ಇವರು ನಡೆಸಿಕೊಳ್ಳುತ್ತಾರೆ. ಅದರಲ್ಲೂ ಸಂಘದ ಕಾರ್ಯದರ್ಶಿಗಳೇ ಸಂಘದಲ್ಲಿ ಇರುವಂತಹ ಮಹಿಳೆಯರಿಗೆ ಅಶ್ಲೀಲ ವಿಡಿಯೋ ಕಳುಹಿಸುತ್ತಾರೆ ಎಂದು ಆರೋಪ ಮಾಡಿದ್ದಾರೆ.

Leave a Reply

Your email address will not be published. Required fields are marked *

error: Content is protected !!