ಬಿಎಂಟಿಸಿ ಬಸ್ ಡಿಕ್ಕಿ: ಗಂಭೀರ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದ 22 ವರ್ಷದ ಯೋಧ ನಿಧನ
ಕೋಲಾರ: ಬೆಂಗಳೂರಿನಲ್ಲಿ ಬಿಎಂಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಗಂಭೀರ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದ ಕೋಲಾರ ಮೂಲದ ಯೋಧ ಚೇತನ್(22 ) ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾರೆ.
ಕೋಲಾರ ಜಿಲ್ಲೆ ಬಂಗಾರಪೇಟೆ ತಾಲೂಕಿನ ಚಿನ್ನಕೋಟೆ ಗ್ರಾಮದ ಚೇತನ್ ತಂದೆ ಸುರೇಶ್ ಕೂಡ ನಿವೃತ್ತ ಯೋಧರಾಗಿದ್ದು, ಚೇತನ್, ಮದ್ರಾಸ್ ರೆಜಿಮೆಂಟ್ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು.
ಚೇತನ್ ರಜೆ ಮೇಲೆ ಊರಿಗೆ ಬಂದಿದ್ದು, ಅಕ್ಟೋಬರ್ 7ರಂದು ಬೆಂಗಳೂರಿನ ಕಾಮಾಕ್ಷಿಪಾಳ್ಯ ಬಳಿ ಚೇತನ್ಗೆ ಬಿಎಂಟಿಸಿ ಬಸ್ ಡಿಕ್ಕಿ ಹೊಡೆದಿದ್ದು ಗಂಭಿರ ಗಾಯಗೊಂಡ ಅವರು ಚಿಕಿತ್ಸೆ ಪಡೆಯುತ್ತಿದ್ದರು ಆದರೆ ಚಿಕಿತ್ಸೆ ಫಲಿಸದೆ ಇಂದು ಮೃತಪಟ್ಟಿದ್ದಾರೆ.





