February 4, 2026

ರಾಜ್ಯದ ಎಲ್ಲಾ ಜಿಲ್ಲಾಸ್ಪತ್ರೆಗಳಲ್ಲಿ 24X7 ಸಹಾಯವಾಣಿ ಆರಂಭ -‌ ಸಚಿವ ಸುಧಾಕರ್

0
IMG-20221117-WA0022.jpg

ಬೆಂಗಳೂರು: ರಾಜ್ಯಾದ್ಯಂತ ಆಸ್ಪತ್ರೆಗಳಲ್ಲಿ 24X7 ಸಹಾಯವಾಣಿ ತೆರೆಯುವುದಾಗಿ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಕೆ ಸುಧಾಕರ್‌ ತಿಳಿಸಿದ್ದಾರೆ.

ಈ ಕುರಿತು ಮಾತನಾಡಿದ ಅವರು, ತುಮಕೂರು ಜಿಲ್ಲೆಯಲ್ಲಿ ಇತ್ತೀಚೆಗೆ ಸಂಬಂಧಿಸಿದ ತಾಯಿ-ಮಗು ಸಾವಿನ ಪ್ರಕರಣ ಮತ್ತೆ ಮರುಕಳಿಸದಂತೆ ರಾಜ್ಯಾದ್ಯಂತ ಆಸ್ಪತ್ರೆಗಳಲ್ಲಿ 24X7 ಸಹಾಯವಾಣಿ ತೆರೆಯಲಾಗುವುದು. ಆರೋಗ್ಯ ಸಮಸ್ಯೆಯಿಂದ ಸರ್ಕಾರಿ ಆಸ್ಪತ್ರೆಗೆ ಆಗಮಿಸುವ ಸಾರ್ವಜನಿಕರಿಗೆ ಸಕಾಲದಲ್ಲಿ ಸೂಕ್ತ ಚಿಕಿತ್ಸೆ ದೊರೆಯುವಂತೆ ನೋಡಿಕೊಳ್ಳಿ ಎಂದು ಸೂಚನೆ ನೀಡಿದ್ದಾರೆ.

ಇನ್ನು ಈ ಸಹಾಯವಾಣಿಗೆ ಸಾಮಾಜಿಕ ಭದ್ರತೆ ಇರುವಂತಹ 4 ಸಿಬ್ಬಂದಿಯನ್ನು ನೇಮಿಸಿಕೊಳ್ಳಬೇಕು. ಈ ಸಹಾಯವಾಣಿ ದಿನದ 24 ಗಂಟೆ ಕರ್ತವ್ಯ ನಿರ್ವಹಿಸುವಂತೆ ನೋಡಿಕೊಳ್ಳಬೇಕು. ಹಗಲು ಪಾಳಿಯಲ್ಲಿ ಇಬ್ಬರು ಮತ್ತು ರಾತ್ರಿ ಪಾಳಿಯಲ್ಲಿ ಇಬ್ಬರು ಕೆಲಸ ನಿರ್ವಹಿಸುವಂತೆ ಅಧಿಕಾರಿಗಳಿಗೆ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!