ಮಂತ್ರಾಲಯದ 6ನೇ ಮಹಡಿಯಿಂದ ಜಿಗಿದು ವ್ಯಕ್ತಿ ಆತ್ಮಹತ್ಯೆಗೆ ಯತ್ನ: ಸುರಕ್ಷತಾ ಜಾಲದ ಸಹಾಯದಿಂದ ರಕ್ಷಣೆ
ಮುಂಬೈ: ಮುಂಬೈನ ಮಂತ್ರಾಲಯದ ಆರನೇ ಮಹಡಿಯಿಂದ ಜಿಗಿದು ವ್ಯಕ್ತಿಯೊಬ್ಬ ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದ್ದು, ಕಟ್ಟಡದಲ್ಲಿ ಅಳವಡಿಸಲಾಗಿರುವ ಸುರಕ್ಷತಾ ಜಾಲದ ಸಹಾಯದಿಂದ ಆತನನ್ನು ರಕ್ಷಿಸಲಾಗಿದೆ.
ಬಾಪು ಮೊಕಶಿ (43) ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ.
ಈತ ಮಂತ್ರಾಲಯ ಕಟ್ಟಡದ ಆರನೇ ಮಹಡಿಯಿಂದ ಕೆಳಗೆ ಜಿಗಿದಿದ್ದು, ಅಲ್ಲಿ ಕೆಳಭಾಗದ ತೆರೆದ ಜಾಗದಲ್ಲಿ ಸುರಕ್ಷತಾ ನೆಟ್ ಕಟ್ಟಿರುವುದರಿಂದ ಅದಕ್ಕೆ ಬಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಬಳಿಕ ಆತನನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಆತನಿಗೆ ಯಾವುದೇ ದೊಡ್ಡ ಮಟ್ಟದ ಗಾಯಗಳಾಗಿಲ್ಲ. ಪೊಲೀಸರು ತನಿಖೆ ಕೈಗೆತ್ತಿಕೊಂಡಿದ್ದು, ಹೆಚ್ಚಿನ ಮಾಹಿತಿ ಇನ್ನಷ್ಟೇ ಲಭಿಸಬೇಕಿದೆ.





