February 4, 2026

ಶ್ರದ್ಧಾ ಹತ್ಯೆ ಪ್ರಕರಣ – ಅಫ್ತಾಬ್ ಪೊಲೀಸ್ ಕಸ್ಟಡಿ ವಿಸ್ತರಣೆ, ಗಲ್ಲು ಶಿಕ್ಷೆಗೆ ವಕೀಲರ ಆಗ್ರಹ

0
IMG-20221118-WA0013.jpg

ನವದೆಹಲಿ: ಶ್ರದ್ಧಾ ವಾಕರ್ ಹತ್ಯೆ ಪ್ರಕರಣದ ಆರೋಪಿ ಅಫ್ತಾಬ್ ಅಮೀನ್ ಪೂನಾವಾಲಾನನ್ನು ನ.17ರಂದು ದೆಹಲಿಯ ಸಾಕೇತ್ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ವಿಚಾರಣೆಗೆ ಅಫ್ತಾಬ್ ಹಾಜರಾಗುವ ಮುನ್ನ ವಕೀಲರು ಸಾಕೇತ್ ನ್ಯಾಯಾಲಯದಲ್ಲಿ ಪ್ರತಿಭಟನೆ ನಡೆಸಿದ್ದು, ಆತನಿಗೆ ಗಲ್ಲು ಶಿಕ್ಷೆ ಆಗುವಂತೆ ಆಗ್ರಹಿಸಿದ್ದಾರೆ.

ವಿಚಾರಣೆಗೆ ಅಫ್ತಾಬ್ ಹಾಜರಾಗುವ ಮುನ್ನ ವಕೀಲರು ಸಾಕೇತ್ ನ್ಯಾಯಾಲಯದಲ್ಲಿ ಪ್ರತಿಭಟನೆ ನಡೆಸಿದ್ದು, ಶ್ರದ್ಧಾಳ ಕೊಲೆಗಾರನಿಗೆ ಮರಣದಂಡನೆ ವಿಧಿಸಬೇಕು ಎಂದು ಒತ್ತಾಯಿಸಿದ್ದು, ಇದರ ವಿಡಿಯೋ ಟ್ವೀಟರ್ ನಲ್ಲಿ ವೈರಲ್ ಆಗಿದೆ.

ವಿಡಿಯೋ ಕಾನ್ಫರೆನ್ಸ್ ಮೂಲಕ ಹಾಜರಾದ ಅಫ್ತಾಬ್‍ನನ್ನುಸಾಕೇತ್ ಕೋರ್ಟ್ 5 ದಿನಗಳ ಪೊಲೀಸ್ ಕಸ್ಟಡಿಗೆ ಒಪ್ಪಿಸಿದ್ದು, ಆತನನ್ನು 10 ದಿನಗಳ ಕಸ್ಟಡಿಗೆ ಒಪ್ಪಿಸುವಂತೆ ದೆಹಲಿ ಪೊಲೀಸರು ಬೇಡಿಕೆ ಇಟ್ಟಿದ್ದರು. ನಾರ್ಕೋ ಪರೀಕ್ಷೆಗೆ ಸಂಬಂಧಿಸಿದಂತೆ ದೆಹಲಿ ಪೊಲೀಸರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ಸಹ ನ್ಯಾಯಾಲಯದಲ್ಲಿ ನಡೆದಿದೆ.

Leave a Reply

Your email address will not be published. Required fields are marked *

error: Content is protected !!