February 4, 2026

ಎಕ್ಸ್‌ಪ್ರೆಸ್‌ವೇಯಲ್ಲಿ ಕಾರು ಮತ್ತೊಂದು ವಾಹನಕ್ಕೆ ಢಿಕ್ಕಿ: ಐವರು ಮೃತ್ಯು, ಮೂವರು ಗಾಯ

0
image_editor_output_image-1853664961-1668749272971.jpg

ಮಹಾರಾಷ್ಟ್ರ: ಖೋಪೋಲಿ ಪ್ರದೇಶದ ಬಳಿ ಮುಂಬೈ ಪುಣೆ ಎಕ್ಸ್‌ಪ್ರೆಸ್‌ವೇಯಲ್ಲಿ ಇಂದು ಶುಕ್ರವಾರ ನಸುಕಿನ ಜಾವ ಕಾರು ಮತ್ತೊಂದು ವಾಹನಕ್ಕೆ ಢಿಕ್ಕಿ ಹೊಡೆದ ಪರಿಣಾಮ ಐವರು ಮೃತಪಟ್ಟು ಮೂವರು ಗಾಯಗೊಂಡ ಘಟನೆ ನಡೆದಿದೆ.

ಅಪಘಾತವಾದ ಸ್ಥಳದಲ್ಲಿ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದರೆ, ಒಬ್ಬರು ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಕೊನೆಯುಸಿರೆಳೆದರು. ಗಾಯಾಳುಗಳನ್ನು ಕಾಮೋಥೆಯ ಎಂಜಿಎಂ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗುತ್ತಿದೆ.

Leave a Reply

Your email address will not be published. Required fields are marked *

You may have missed

error: Content is protected !!