February 3, 2026

ಶಿಕಾರಿಪುರದಲ್ಲಿ ಜೆಡಿಎಸ್‌ಗೆ ಗುಡ್ ಬೈ ಹೇಳಿ ಬಿಜೆಪಿಯತ್ತ ಮುಖ ಮಾಡಿದ ಬಳಿಗಾರ್: ಬಿಎಸ್‌ವೈ ಸಮ್ಮುಖದಲ್ಲಿ ಕಮಲಕ್ಕೆ ಸೇರ್ಪಡೆ

0
IMG-20221118-WA0028.jpg

ಶಿಕಾರಿಪುರ: ಬಿ.ಎಸ್.ಯಡಿಯೂರಪ್ಪ ಅವರ ಭದ್ರಕೋಟೆ ಶಿಕಾರಿಪುರದಲ್ಲಿ ಚುನಾವಣೆಗೆ ನಾಲ್ಕೈದು ತಿಂಗಳಿರುವಾಗಲೇ ಜೆಡಿಎಸ್ ಅಭ್ಯರ್ಥಿಯನ್ನೇ ಬಿಜೆಪಿ ತೆಕ್ಕೆಗೆ ಸೆಳೆದುಕೊಂಡಿದೆ.

ಜೆಡಿಎಸ್‌‌ನಿಂದ ಕಳೆದ 2 ವಿಧಾನಸಭಾ ಚುನಾವಣೆಯಲ್ಲಿ ಸ್ಫರ್ಧಿಸಿದ್ದ ಅಭ್ಯರ್ಥಿ ಹೆಚ್.ಟಿ. ಬಳಿಗಾರ್ ರವರನ್ನು ಬಿಜೆಪಿ ಸೆಳೆದುಕೊಂಡಿದೆ.

ವಮೊಗ್ಗ ಬಿಜೆಪಿ ಕಚೇರಿಯಲ್ಲಿ ಶುಕ್ರವಾರ ಮಾಜಿ ಸಿಎಂ ಯಡಿಯೂರಪ್ಪ ಸಮ್ಮುಖದಲ್ಲಿ ಅಧಿಕೃತವಾಗಿ ಬಳಿಗಾರ್ ಬಿಜೆಪಿ ಸೇರಿದ್ದು, ಹಲವು ಮುಖಂಡರು ಹಾಗೂ ನೂರಾರು ಕಾರ್ಯಕರ್ತರೊಂದಿಗೆ ಬಳಿಗಾರ್ ಬಿಜೆಪಿ ಸೇರಿದ್ದಾರೆ.

ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಗೃಹಸಚಿವ ಆರಗ ಜ್ಞಾನೇಂದ್ರ, ಸಂಸದ ಬಿ.ವೈ.ರಾಘವೇಂದ್ರ, ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

error: Content is protected !!