ಉಡುಪಿ: ನಾವು ಯಾರ ಜೊತೆಯೂ ತಗಾದೆ ಶುರು ಮಾಡಲ್ಲ, ಭಾರತದ ತಂಟೆಗೆ ಬಂದರೆ ತಕ್ಕ ಉತ್ತರ ನೀಡುತ್ತೇವೆ : ಸಚಿವ ರಾಜನಾಥ್ ಸಿಂಗ್
ಉಡುಪಿ: ಭಯೋತ್ಪಾದನೆ ನಿಗ್ರಹ ವಿಚಾರದಲ್ಲಿ ಭಾರತ ನಾಯಕತ್ವ ವಹಿಸಿದ್ದು, ನಾವು ಕಾಲು ಕೆರೆದುಕೊಂಡು ಯಾರ ಜೊತೆಯೂ ತಗಾದೆ ಶುರು ಮಾಡುವುದಿಲ್ಲ. ಭಾರತದ ತಂಟೆಗೆ ಬಂದರೆ ತಕ್ಕ ಉತ್ತರ ನೀಡುತ್ತೇವೆ ಎಂದು ಭಾರತದ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ.
ಉಡುಪಿಯಲ್ಲಿ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ಇಡೀ ಪ್ರಪಂಚ ಭಾರತದ ಮಾತು ಕೇಳುವ ಕಾಲ ಬಂದಿದೆ. ಐದು ವರ್ಷದಲ್ಲಿ ವಿಶ್ವದ ಮೂರನೇ ಆರ್ಥಿಕ ದೇಶವಾಗಿ ಭಾರತ ಸದೃಢವಾಗಿ ನಿಲ್ಲಲಿದೆ ಎಂದರು.
ಇನ್ನು ಭಾರತ 2047ಕ್ಕೆ ಪ್ರಪಂಚ ಮೊದಲ ಸ್ಥಾನದಲ್ಲಿ ನಿಲ್ಲಲಿದೆ. ದೇಶವನ್ನು ಐದು ಟ್ರಿಲಿಯನ್ ಆರ್ಥಿಕ ರಾಷ್ಟ್ರ ಮಾಡುವುದು ಪ್ರಧಾನಿ ಮೋದಿ ಕನಸು. ದೇಶದ ಯುವ ಜನಾಂಗ ಇದಕ್ಕೆ ಕೊಡುಗೆ ನೀಡುತ್ತಿದ್ದೇವೆ ಎಂದಿದ್ದಾರೆ
ಭಾರತದ ಆರ್ಥಿಕ ಸದೃಢತೆ ಗುಣಮಟ್ಟದ ಮಾನವ ಸಂಪನ್ಮೂಲಗಳಲ್ಲಿ ಇದೆ ಎಂದು ಹೇಳಿದ್ದಾರೆ.





