ತನ್ನ ಮಕ್ಕಳನ್ನು ನೋಡಲು ಬಿಡದಿದ್ದಕ್ಕೆ ಮನೆಗೇ ಬೆಂಕಿಯಿಟ್ಟ ಪತಿ
ಹಾಸನ: ಪಾಪಿ ಪತಿ ಮಹಾಶಯನೊಬ್ಬ ತನ್ನ ಮಕ್ಕಳನ್ನು ನೋಡಲು ಬಿಡದಿದ್ದಕ್ಕೆ ಮನೆಗೇ ಬೆಂಕಿಯಿಟ್ಟ ಘಟನೆ ಹಾಸನದಲ್ಲಿ ನಡೆದಿದೆ.
ಹಾಸನ ತಾಲೂಕಿನ, ದೊಡ್ಡಬೀಕನಹಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಘಟನೆಯಿಂದ ಮನೆಯೊಳಗಿದ್ದ ಪತ್ನಿ, ಇಬ್ಬರು ಗಂಡು ಮಕ್ಕಳು ಗಂಭೀರ ಗಾಯಗೊಂಡಿದ್ದಾರೆ. ಸದ್ಯ ಗಾಯಾಳುಗಳಾದ ಗೀತಾ, ಚಿರಂತನ್ (7), ನಂದನ್ (5)ಗೆ ಹಾಸನದ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ರಂಗಸ್ವಾಮಿ ಮನೆಗೆ ಬೆಂಕಿ ಹಚ್ಚಿದ ಆರೋಪಿಯಾಗಿದ್ದು, ಜಮೀನು ವಿಚಾರಕ್ಕೆ ರಂಗಸ್ವಾಮಿ ಹಾಗೂ ಗೀತಾ ನಡುವೆ ಜಗಳವಾಗಿತ್ತು. ಈ ಸಂಬಂಧ ಗೊರೂರು ಪೊಲೀಸ್ ಠಾಣೆ ಯಲ್ಲಿ ಪ್ರಕರಣ ಕೂಡ ದಾಖಲಾಗಿತ್ತು. ಹೀಗಾಗಿ ನಾಲ್ಕು ತಿಂಗಳಿನಿಂದ ಪತಿ ಹಾಗೂ ಪತ್ನಿ, ಮಕ್ಕಳು ಪ್ರತ್ಯೇಕವಾಗಿದ್ದರು.




