February 4, 2026

ಜಮ್ಮು ಕಾಶ್ಮೀರದಲ್ಲಿ ಹಿಮಪಾತಕ್ಕೆ ಸಿಲುಕಿ ಮೂವರು ಯೋಧರು ಹುತಾತ್ಮ

0
IMG-20221119-WA0029.jpg

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಕುಪ್ವಾರ ಜಿಲ್ಲೆಯ ಮಚಿಲ್ ಸೆಕ್ಟರ್‌ನಲ್ಲಿ ಹಿಮಪಾತಕ್ಕೆ ಸಿಲುಕಿ ಮೂವರು ಯೋಧರು ಹುತಾತ್ಮರಾದ ಘಟನೆ ನಡೆದಿದೆ.

ಈ ಕುರಿತು ಶ್ರೀನಗರದಲ್ಲಿ ಮಾಹಿತಿ ನೀಡಿರುವ ಅಧಿಕಾರಿಗಳು, 56 ಆರ್‌ಆರ್‌ನ ಮೂವರು ಸೈನಿಕರು ಹಿಮಪಾತಕ್ಕೆ ಸಿಲುಕಿ ಹುತಾತ್ಮರಾದರು ಎಂದು ತಿಳಿಸಿದ್ದಾರೆ.

ಘಟನೆ ಮಾಹಿತಿ ತಿಳಿದ ಕೂಡಲೇ ಶೋಧ ಕಾರ್ಯಾಚರಣೆ ನಡೆಸಲಾಯಿತು. ಮೂವರು ಸೈನಿಕರ ಮೃತದೇಹಗಳನ್ನು ಹೊರ ತೆಗೆಯಲಾಗಿದೆ ಎಂದಿದ್ದಾರೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ಲಭಿಸಬೇಕಿದೆ.

Leave a Reply

Your email address will not be published. Required fields are marked *

You may have missed

error: Content is protected !!