ಕಾರ್ಕಳ: ಆಂಬುಲೆನ್ಸ್‌ನಲ್ಲಿಯೇ ಹೆಣ್ಣು ಮಗುವಿಗೆ ಜನ್ಮ ನೀಡಿದ ತಾಯಿ
ಕಾರ್ಕಳ: ಮಹಿಳೆಯೋರ್ವರು ಹೆರಿಗೆಗೆಂದು ಕಾರ್ಕಳ ತಾಲೂಕಿನ ಕಲ್ಯಾದಿಂದ ಆಂಬುಲೆನ್ಸ್ ನಲ್ಲಿ ಆಸ್ಪತ್ರೆಗೆ ಬರುವಾಗ ಮಾರ್ಗ ಮಧ್ಯೆ ಆಂಬುಲೆನ್ಸ್ ನಲ್ಲಿಯೇ ಹೆಣ್ಣು ಮಗುವಿಗೆ ಜನ್ಮ ನೀಡಿರುವ ಘಟನೆ ನಡೆದಿದೆ.
ಆಸ್ಪತ್ರೆಗೆ ಕರೆದೊಯ್ಯುವ ವೇಳೆ 11 ಗಂಟೆ ವೇಳೆಗೆ ಆಂಬುಲೆನ್ಸ್ ನಲ್ಲಿಯೇ ಮಗುವಿಗೆ ಜನ್ಮ ನೀಡಿದ್ದಾರೆ.
ಇನ್ನು ತಾಯಿ ನೀಲಮ್ಮ ಮತ್ತು ಮತ್ತು ಮಗು ಆರೋಗ್ಯವಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ.





