February 4, 2026

ಕಾಸರಗೋಡು: ಎಂಡಿಎಂಎ ಮಾದಕ ವಸ್ತು ಸಹಿತ ಇಬ್ಬರ ಬಂಧನ: ಸಾಗಾಟಕ್ಕೆ ಬಳಸಿದ್ದ ಬೈಕ್ ವಶ

0
IMG-20221119-WA0038.jpg

ಕಾಸರಗೋಡು: ಏಳು ಗ್ರಾಂ ಎಂಡಿಎಂಎ ಮಾದಕ ವಸ್ತು ಸಹಿತ ಇಬ್ಬರನ್ನು ಡಿ ವೈ ಎಸ್ಪಿ ಬಾಲಕೃಷ್ಣನ್ ನಾಯರ್ ನೇತೃತ್ವದ ಪೊಲೀಸ್ ತಂಡ ಬಂಧಿಸಿದೆ.

ಕಾಞ೦ಗಾಡ್ ನ ಸಕರಿಯ (23) ಮತ್ತು ಮುಹಮ್ಮದ್ ಇರ್ಷಾದ್ (21) ಬಂಧಿತರು. ಇಬ್ಬರನ್ನು ಪ್ರತ್ಯೇಕ ಪ್ರಕರಣದಲ್ಲಿ ಬಂಧಿಸಲಾಗಿದೆ. ಸಕರಿಯ ಬಳಿಯಿಂದ 4 ಗ್ರಾಂ ಮಾದಕವಸ್ತುವನ್ನು ವಶಪಡಿಸಿಕೊಳ್ಳಲಾಗಿದೆ. ಸಾಗಾಟಕ್ಕೆ ಬಳಸಿದ್ದ ಬೈಕ್ ನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ.

ಇರ್ಷಾದ್ ನಿಂದ ಮೂರು ಗ್ರಾಂ ಮಾದಕವಸ್ತುವನ್ನು ವಶಪಡಿಸಿಕೊಳ್ಳಲಾಗಿದೆ. ಕಾಞ೦ಗಾಡ್ ರೈಲು ನಿಲ್ದಾಣ ಪರಿಸರದಿಂದ ಇವರನ್ನು ಬಂಧಿಸಲಾಗಿದೆ. ಬೆಂಗಳೂರಿನಿಂದ ಮಾದಕವಸ್ತುವನ್ನು ಕಾಸರಗೋಡಿಗೆ ತಂದು ಜಿಲ್ಲೆಯ ವಿವಿಧೆಡೆಗಳಲ್ಲಿ ಮಾರಾಟ ಮಾಡುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!