February 4, 2026

ಉಪ್ಪಿನಂಗಡಿ: ಕೆಎಸ್‌ಆರ್‌ಟಿಸಿ ಬಸ್ ನಲ್ಲಿ ಅನ್ಯಕೋಮಿನ ಯುವಕನಿಂದ ಯುವತಿಯೊಂದಿಗೆ ಅಸಭ್ಯ ವರ್ತನೆ:
ಯುವಕನಿಗೆ ಪೊಲೀಸರಿಂದ ಎಚ್ಚರಿಕೆ

0
IMG-20221119-WA0032.jpg

ಉಪ್ಪಿನಂಗಡಿ: ಅನ್ಯಕೋಮಿನ ಯುವಕನೋರ್ವ ಯುವತಿಯ ಜೊತೆ ಅಸಭ್ಯವಾಗಿ ವರ್ತಿಸಿದ ಘಟನೆ ಹಾಸನದಿಂದ ಮಂಗಳೂರಿಗೆ ತೆರಳುವ ಕೆ.ಎಸ್.ಆರ್.ಟಿ.ಸಿ ಬಸ್ ನಲ್ಲಿ ನಡೆದಿದೆ.

ಹಾಸನದಿಂದ ಮಂಗಳೂರಿಗೆ ತೆರಳುವ ಬಸ್ ನಲ್ಲಿ ಪೆರ್ನೆ ಮೂಲದ ಅನ್ಯಕೋಮಿನ ಯುವಕನೋರ್ವ ಯುವತಿಯ ಜೊತೆ ಅಸಭ್ಯವಾಗಿ ವರ್ತಿಸಿದ್ದು, ಈ ಸಂದರ್ಭದಲ್ಲಿ ಯುವತಿ ಜೋರಾಗಿ ಬೊಬ್ಬೆ ಹೊಡೆದಿದ್ದು, ಈ ವೇಳೆ ಬಸ್ ನಲ್ಲಿದ್ದವರು ಯುವಕನನ್ನು ಹಿಡಿದು ಉಪ್ಪಿನಂಗಡಿ ಪೊಲೀಸ್ ಠಾಣೆಗೆ ಒಪ್ಪಿಸಿದ್ದಾರೆ ಎಂದು ವರದಿಯಾಗಿದೆ.

ಯುವಕನನ್ನು ವಶಕ್ಕೆ ಪಡೆದ ಪೊಲೀಸರು ಯುವತಿ ಆತನ ವಿರುದ್ಧ ಠಾಣೆಗೆ ದೂರು ನೀಡದ ಹಿನ್ನೆಲೆ ವಿಚಾರಣೆ ನಡೆಸಿ, ಎಚ್ಚರಿಕೆ ನೀಡಿ ಕಳುಹಿಸಿದ್ದಾರೆ ಎಂದು ತಿಳಿದು ಬಂದಿದೆ.

Leave a Reply

Your email address will not be published. Required fields are marked *

error: Content is protected !!