March 20, 2026

ಮಂಗಳೂರು: ಆಟೋ ಸ್ಫೋಟ ಪ್ರಕರಣಕ್ಕೆ ಹೊಸ ತಿರುವು: ದಾಳಿಯ ಸಂಚು ದೃಢ, ಭಯೋತ್ಪಾದನೆ ಕೃತ್ಯ ಎಂದ ಡಿಜಿಪಿ

0
IMG-20221120-WA0011.jpg

ಮಂಗಳೂರು: ಶನಿವಾರ ಸಂಜೆ ಮಂಗಳೂರಿನ ನಾಗುರಿ ಬಳಿ ಆಟೋರಿಕ್ಷಾದಲ್ಲಿ ಸಂಭವಿಸಿದ ಸ್ಫೋಟವು ಭಯೋತ್ಪಾದಕತೆ ತಿರುವು ಪಡೆದುಕೊಂಡಿದೆ.

ಈ ಕುರಿತು ಟ್ವೀಟ್ ಮಾಡಿರುವ ಕರ್ನಾಟಕ ಡಿಜಿಪಿ, ಈ ಸ್ಫೋಟವು ಆಕಸ್ಮಿಕವಲ್ಲ. ಗಂಭೀರ ಹಾನಿಯನ್ನುಂಟುಮಾಡುವ ಉದ್ದೇಶದಿಂದ ಭಯೋತ್ಪಾದನೆಯ ಕೃತ್ಯವಾಗಿದೆ. ಕರ್ನಾಟಕ ರಾಜ್ಯ ಪೊಲೀಸರು ಕೇಂದ್ರ ಏಜೆನ್ಸಿಗಳೊಂದಿಗೆ ಇದರ ಬಗ್ಗೆ ಆಳವಾದ ತನಿಖೆ ನಡೆಸುತ್ತಿದ್ದಾರೆ ಎಂದಿದ್ದಾರೆ.

ಇನ್ನು ಚಲಿಸುತ್ತಿದ್ದ ಆಟೋ ರಿಕ್ಷಾದಲ್ಲಿ ನಿಗೂಢ ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿ ಪರಿಶೀಲನೆ ವೇಳೆ ಆಟೋದಲ್ಲಿ ಅನುಮಾನಾಸ್ಪದ ವಸ್ತುಗಳು ಪತ್ತೆಯಾಗಿದ್ದು, ಆಟೋದಲ್ಲಿ ಎರಡು ಬ್ಯಾಟರಿ, ನಟ್ಟು​ ಬೋಲ್ಟ್​​, ಸರ್ಕ್ಯೂಟ್​​ ರೀತಿಯ ವೈರಿಂಗ್ ಮಾಡಿರುವ ವಸ್ತು ಪತ್ತೆಯಾಗಿದೆ.

Leave a Reply

Your email address will not be published. Required fields are marked *

error: Content is protected !!