August 13, 2026

ಮಂಗಳೂರು: ಆಟೋದಲ್ಲಿ ಸ್ಫೋಟ ಪ್ರಕರಣ: ನಟ್‌, ಬೋಲ್ಟ್‌, ಬ್ಯಾಟರಿ ಪತ್ತೆ, ಚುರುಕುಗೊಂಡ ತನಿಖೆ

0
IMG-20221120-WA0013.jpg

ಮಂಗಳೂರಿನ ನಾಗುರಿ ಬಳಿ ಸಂಭವಿಸಿದ ಆಟೋರಿಕ್ಷಾದಲ್ಲಿ ಕುಕ್ಕರ್ ಸ್ಫೋಟ ಪ್ರಕರಣ ಹೊಸ ತಿರುವು ಪಡೆದುಕೊಂಡಿದ್ದು, ಪರಿಶೀಲನೆ ವೇಳೆ ಸಂಶಯಾಸ್ಪದ ವಸ್ತುಗಳು ಪತ್ತೆಯಾಗಿದೆ.

ರಿಕ್ಷಾದಲ್ಲಿ ನಟ್, ಬೋಲ್ಟ್‌, ಬ್ಯಾಟರಿ, ಸರ್ಕಿಟ್ ರೀತಿಯ ವೈರಿಂಗ್ ಇರುವ ವಸ್ತುಗಳು ಪತ್ತೆಯಾಗಿದ್ದು, ಲಘು ತೀವ್ರತೆ ಇರುವ ಸ್ಪೋಟಕ ಬಳಸಿರುವ ಶಂಕೆ ವ್ಯಕ್ತವಾಗಿದ್ದು, ವಿಧಿವಿಜ್ಞಾನ ಪ್ರಯೋಗಾಲಯ, ಬಾಂಬ್ ನಿಷ್ಕ್ರೀಯ ದಳದಿಂದ ಪರಿಶೀಲನೆ ನಡೆಯುತ್ತಿದೆ.

ಮಂಗಳೂರು ಜಂಕ್ಷನ್ ರೈಲು ನಿಲ್ದಾಣದಿಂದ ಬರುತ್ತಿದ್ದ ಆಟೋವವನ್ನು ನಾಗುರಿ ಬಳಿ ಪ್ರಯಾಣಿಕ ಹತ್ತಿದ್ದು, ಆಟೋ ಒಂದು ಕಿ.ಮೀ ಕ್ರಮಿಸುವಷ್ಟರಲ್ಲಿ ನಿಗೂಢ ಸ್ಫೋಟಗೊಂಡಿದ್ದು ಹಲವು ಅನುಮಾನಕ್ಕೆ ಕಾರಣವಾಗಿದೆ.

Leave a Reply

Your email address will not be published. Required fields are marked *

You may have missed

error: Content is protected !!