August 13, 2026

ಮೂಡಿಗೆರೆಯಲ್ಲಿ ಕಾಡಾನೆ ದಾಳಿಗೆ ಮಹಿಳೆ ಬಲಿ: ದಾಳಿಗೆ ಅರಣ್ಯ ಇಲಾಖೆ ನಿರ್ಲಕ್ಷವೇ ಕಾರಣ ಎಂದು ಗ್ರಾಮಸ್ಥರು ಆಕ್ರೋಶ

0
IMG-20221120-WA0015.jpg

ಮೂಡಿಗೆರೆ: ಕಾಡಾನೆ ದಾಳಿಗೆ ತತ್ತರಿಸಿರುವ ಮೂಡಿಗೆರೆಯಲ್ಲಿ ಮತ್ತೊಂದು ಬಲಿಯಾಗಿದೆ. ಮೂಡಿಗೆರೆ ತಾಲೂಕಿನ ಹುಲೇಮನೆ ಕುಂದೂರು ಗ್ರಾಮದಲ್ಲಿ ಜಾನುವಾರುಗಳಿಗೆ ಹುಲ್ಲು ತರಲು ಹೋದ ಮಹಿಳೆ ಮೇಲೆ ಕಾಡಾನೆ ದಾಳಿ ನಡೆಸಿದೆ.

ಮೃತ ಮಹಿಳೆಯನ್ನು 45 ವರ್ಷದ ಶೋಭಾ ಅಮೃತ ಎಂದು ಗುರುತಿಸಲಾಗಿದೆ. ಮಹಿಳೆಯ ಶವವನ್ನು ಕಾಡಾನೆ ನಜ್ಜುಗುಜ್ಜು ಮಾಡಿದೆ.

ಮಲೆನಾಡು ಭಾಗದಲ್ಲಿ ಕಾಡಾನೆ ಹಾವಳಿ ಮಿತಿಮೀರಿದ್ದು ಜನರು ಆತಂಕದಲ್ಲಿ ಬದುಕು ಸಾಗಿಸುವ ಪರಿಸ್ಥಿತಿ ನಿರ್ಮಾಣವಾಗಿದೆ. ಕಾಡಾನೆ ದಾಳಿಗೆ ಅರಣ್ಯ ಇಲಾಖೆ ನಿರ್ಲಕ್ಷವೇ ಕಾರಣ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Leave a Reply

Your email address will not be published. Required fields are marked *

You may have missed

error: Content is protected !!