ಮಾಣಿ: ಪಾದಾಚಾರಿಗೆ ಬೈಕ್ ಡಿಕ್ಕಿ: ಪುತ್ತೂರು ಮೂಲದ ವ್ಯಕ್ತಿ ಮೃತ್ಯು
ವಿಟ್ಲ: ರಸ್ತೆ ದಾಟುತ್ತಿದ್ದ ಪಾದಾಚಾರಿಗೆ ಬೈಕ್ ಹೊಡೆದ ಪರಿಣಾಮ ಪಾದಾಚಾರಿ ಸ್ಥಳದಲ್ಲೇ ಮೃತಪಟ್ಟ ಘಟನೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಮಾಣಿ ಸಮೀಪದ ಬೊಲ್ಲುಕಲ್ಲು ಎಂಬಲ್ಲಿ ನಡೆದಿದೆ.
ಪುತ್ತೂರು ನಿವಾಸಿ ಸುಭಾಕರ ಮೃತಪಟ್ಟವರು.
ಅವರು ಮಗಳ ಮನೆಗೆ ಪುತ್ತೂರಿಗೆ ತೆರಳಲು ರಸ್ತೆ ದಾಟುತ್ತಿದ್ದಾಗ ಬೈಕ್ ಡಿಕ್ಕಿ ಹೊಡೆದಿದೆ.
ಸೋಶಿಯಲ್ ಇಕ್ವಾ ಮಾಣಿ ಆಂಬುಲೆನ್ಸ್ ಮೂಲಕ ಆಸ್ಪತ್ರೆ ಕೊಂಡೊಯ್ಯಲಾಗಿತ್ತು.





