December 19, 2025

ಪ್ರಧಾನಿ ಮೋದಿಯ 1 ಗಂಟೆಯ ವೇದಿಕೆಯ ಕಾರ್ಯಕ್ರಮಕ್ಕೆ 23 ಕೋಟಿ ರೂ. ಖರ್ಚು ಮಾಡುತ್ತಿದೆ ಮಧ್ಯಪ್ರದೇಶದ ಸರಕಾರ

0
image_editor_output_image-1326669739-1636778531077.jpg

ಭೋಪಾಲ್: ಮಧ್ಯಪ್ರದೇಶ ತನ್ನ ಬುಡಕಟ್ಟು ಜನರ ಕಾರ್ಯಕ್ರಮದಲ್ಲಿ ಭಾಗವಹಿಸಲು ಪ್ರಧಾನಿ ನರೇಂದ್ರ ಮೋದಿ ಮುಂದಿನ ವಾರ ಭೋಪಾಲ್‌ ಗೆ ಆಗಮಿಸಲಿದ್ದಾರೆ.

ಪ್ರಧಾನಿ ಮೋದಿ ಭೋಪಾಲ್ ನಲ್ಲಿ ನಾಲ್ಕು ಗಂಟೆಗಳ ಕಾಲ ಮತ್ತು ವೇದಿಕೆಯಲ್ಲಿ 1 ಗಂಟೆ 15 ನಿಮಿಷಗಳ ಕಾಲ ಇರುತ್ತಾರೆ, ಇದಕ್ಕಾಗಿ ಐದು ಗುಮ್ಮಟಗಳನ್ನು ನಿರ್ಮಿಸಲಾಗುತ್ತಿದೆ. ಈ ಕಾರ್ಯಕ್ರಮಕ್ಕೆ ರಾಜ್ಯ ಸರ್ಕಾರ 23 ಕೋಟಿ ರೂ. ಗೂ ಹೆಚ್ಚು ವೆಚ್ಚ ಮಾಡುತ್ತಿದ್ದು, ಈ ಪೈಕಿ 13 ಕೋಟಿ ರೂ. ಜಾಂಬೂರಿ ಮೈದಾನದಲ್ಲಿ ನಡೆಯುವ ಕಾರ್ಯಕ್ರಮಕ್ಕೆ ಜನರನ್ನು ಸಾಗಿಸಲು ವೆಚ್ಚ ಮಾಡಲಾಗುತ್ತಿದೆ ಎಂದು ವರದಿ ತಿಳಿಸಿದೆ.

ಭಗವಾನ್ ಬಿರ್ಸಾ ಮುಂಡಾ ಅವರ ಸ್ಮರಣಾರ್ಥ ಮಧ್ಯಪ್ರದೇಶವು ನವೆಂಬರ್ 15 ರಂದು ಜಂಜಾಟಿಯ ಗೌರವ್ ದಿವಸ್ ಅನ್ನು ಆಚರಿಸಲಿದೆ. ಪ್ರಧಾನಿ ಮೋದಿ ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ನಗರದ ಜಂಬೂರಿ ಮೈದಾನದಲ್ಲಿ ದೇಶದ ಮೊದಲ ಸಾರ್ವಜನಿಕ ಖಾಸಗಿ ಸಹಭಾಗಿತ್ವದಲ್ಲಿ ನಿರ್ಮಿಸಲಾದ ಹಬೀಬ್‌ಗಂಜ್ ರೈಲು ನಿಲ್ದಾಣವನ್ನು ಲೋಕಾರ್ಪಣೆ ಮಾಡಲಿದ್ದಾರೆ.

Leave a Reply

Your email address will not be published. Required fields are marked *

You may have missed

error: Content is protected !!