March 20, 2026

ಚಿಕ್ಕಮಗಳೂರು: ಕಾಡಾನೆ ದಾಳಿಯಿಂದ ಮಹಿಳೆ ಮೃತಪಟ್ಟ ಪ್ರಕರಣ: ಸ್ಥಳಕ್ಕೆ ಬಂದ ಶಾಸಕನನ್ನು ಅಟ್ಟಾಡಿಸಿ ಹಲ್ಲೆ ನಡೆಸಿ ಬಟ್ಟೆ ಹರಿದ ಗ್ರಾಮಸ್ಥರು

0
image_editor_output_image1594549565-1668968733569

ಚಿಕ್ಕಮಗಳೂರು: ಮೂಡಿಗೆರೆ ತಾಲೂಕು ಕುಂದೂರು ಸಮೀಪದ ಹುಲ್ಲೆಮನೆ ಗ್ರಾಮದ ಶೋಭಾ (45) ಕಾಡಾನೆ ದಾಳಿಯಿಂದ ಭಾನುವಾರ ಬೆಳಗ್ಗೆ ಮೃತಪಟ್ಟಿದ್ದು, ಮೃತದೇಹ ವೀಕ್ಷಿಸಲು ತಡವಾಗಿ ಬಂದ ಮೂಡಿಗೆರೆ ಶಾಸಕ ಎಂ.ಪಿ.ಕುಮಾರಸ್ವಾಮಿ ಅವರನ್ನು ಗ್ರಾಮಸ್ಥರು ಅಟ್ಟಾಡಿಸಿ ಹಲ್ಲೆ ಮಾಡಿರುವುದಲ್ಲದೇ ಬಟ್ಟೆಯನ್ನು ಹರಿದಿರುವ ಘಟನೆ ಭಾನುವಾರ ಸಂಜೆ ನಡೆದಿದೆ.

ಭಾನುವಾರ ಬೆಳಗ್ಗೆ ಮೂಡಿಗೆರೆ ತಾಲೂಕಿನ ಹುಲ್ಲೆಮನೆ ಗ್ರಾಮದಲ್ಲಿ ಕಾಡಾನೆ ದಾಳಿಯಿಂದಾಗಿ ಶೋಭಾ ಮೃತಪಟ್ಟಿದ್ದರು. ಘಟನೆ ಬೆಳಗ್ಗೆ ನಡೆದಿದ್ದರೂ ಕ್ಷೇತ್ರದ ಶಾಸಕ ಎಂ.ಪಿ.ಕುಮಾರಸ್ವಾಮಿ ಸಂಜೆ ವೇಳೆ ಗ್ರಾಮಕ್ಕೆ ತೆರಳಿ ಮೃತದೇಹ ವೀಕ್ಷಿಸಲು ಮುಂದಾಗಿದ್ದರು.

ಈ ವೇಳೆ ಗ್ರಾಮಸ್ಥರು ಆಕ್ರೋಶಗೊಂಡು ಶಾಸಕ ಕುಮಾರಸ್ವಾಮಿ ಅವರಿಗೆ ಘೇರಾವ್ ಹಾಕಿದಲ್ಲದೆ. ಗ್ರಾಮದ ಮುಖ್ಯರಸ್ತೆಯಲ್ಲಿ ಅಟ್ಟಾಡಿಸಿಕೊಂಡು ಬಂದಿದ್ದಾರೆ. ತೀವ್ರ ಅಕ್ರೋಶಗೊಂಡಿದ್ದ ಕೆಲ ಗ್ರಾಮಸ್ಥರು ಅವಾಚ್ಯ ಶಬ್ಧಗಳಿಂದ ನಿಂದಿಸಿದಲ್ಲದೆ. ಶಾಸಕರ ಬಟ್ಟೆ ಹಿಡಿದರು ಜಗ್ಗಾಡಿದ್ದಾರೆ. ಈ ವೇಳೆ ಶಾಸಕರು ಧರಿಸಿದ ಬಟ್ಟೆ ಹರಿದಿದೆ.

ಈ ಕುರಿತು ಪ್ರತಿಕ್ರಿಯಿಸಿದ ಶಾಸಕ ಎಂ.ಪಿ.ಕುಮಾರಸ್ವಾಮಿ, ಆನೆ ದಾಳಿಯಿಂದ ಮೃತಪಟ್ಟ ಮಹಿಳೆಯ ಮೃತದೇಹವನ್ನು ವೀಕ್ಷಿಸಲು ತೆರಳಿದ ವೇಳೆ ನನ್ನ ಮೇಲೆ ಗ್ರಾಮಸ್ಥರು ಹಲ್ಲೆ ನಡೆಸಿದ್ದಾರೆ. ಇದು ವ್ಯವಸ್ಥಿತ ಪಿತೂರಿತಯಾಗಿದೆ. ನಮ್ಮದೇ ಸರ್ಕಾರದ ಪೊಲೀಸ್ ಇಲಾಖೆ ನನಗೆ ರಕ್ಷಣೆ ನೀಡುವಲ್ಲಿ ವಿಫಲವಾಗಿದೆ ಎಂದು ದೂರಿದ್ದಾರೆ.

Leave a Reply

Your email address will not be published. Required fields are marked *

error: Content is protected !!