March 20, 2026

ಮೂಡುಬಿದಿರೆ: ಸ್ಕಿಡ್ ಆಗಿ ಮರಕ್ಕೆ ಡಿಕ್ಕಿ ಹೊಡೆದ ಬೈಕ್: ಸವಾರ ಮೃತ್ಯು

0
WhatsApp-Image-2022-11-21-at-10.17.25-AM.jpeg

ಮೂಡುಬಿದಿರೆ: ಬೈಕ್ ಸ್ಕಿಡ್ ಆಗಿ ಮರಕ್ಕೆ ಡಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಮೂಡುಬಿದಿರೆಯ ಬೆಳುವಾಯಿಯಲ್ಲಿ ನಡೆದಿದೆ.

ಮೂಡುಬಿದಿರೆ ಪುರಸಭೆ ವ್ಯಾಪ್ತಿಯ ರಾಣಿಕೇರಿ ನಿವಾಸಿ, ಮೂಲತಃ ಚಿಕ್ಕಮಗಳೂರಿನ ರಾಜೇಶ್ ಮೃತಪಟ್ಟ ಬೈಕ್ ಸವಾರನಾಗಿದ್ದಾನೆ.

ರಾಜೇಶ್ ಅವರು ಭಾನುವಾರ ಬಾಳೆಹೊನ್ನೂರಿನಲ್ಲಿ ಅಜ್ಜಿಯ ಅಂತ್ಯ ಸಂಸ್ಕಾರ ಮುಗಿಸಿ, ಮೂಡುಬಿದಿರೆಗೆ ವಾಪಾಸ್ಸಾಗುವಾಗ ಈ ಘಟನೆ ನಡೆದಿದೆ ಎನ್ನಲಾಗಿದೆ.

ರಾಷ್ಟ್ರೀಯ ಹೆದ್ದಾರಿಗಾಗಿ ಮರ ಕಡಿದು ರಸ್ತೆ ಪಕ್ಕದಲ್ಲಿ ಹಾಕಲಾಗಿದ್ದು, ಬೆಳುವಾಯಿ ಬಳಿ ಬೈಕ್ ಸ್ಕಿಡ್ ಆಗಿ ತೆರವುಗೊಳಿಸಿದ ಮರಕ್ಕೆ ಡಿಕ್ಕಿ ಹೊಡೆದಿದೆ. ಇನ್ನು ಅಪಘಾತದಲ್ಲಿ ಗಂಭೀರ ಗಾಯಗೊಂಡು ರಕ್ತಸ್ರಾವದಿಂದ ರಾಜೇಶ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ರಾಜೇಶ್ ಅವರಿಗೆ ಒಂದುವರೆ ವರ್ಷದ ಹಿಂದೆ ಮದುವೆಯಾಗಿದ್ದು, ಐದು ತಿಂಗಳ ಮಗುವಿದೆ.

Leave a Reply

Your email address will not be published. Required fields are marked *

error: Content is protected !!