March 20, 2026

ಮಂಗಳೂರು ಆಟೋ ಸ್ಪೋಟ ಪ್ರಕರಣ:ಶಂಕಿತ ಶಾರೀಕ್ ಮನೆ ಮೇಲೆ ಪೊಲೀಸ್ ರೈಡ್

0
IMG-20221121-WA0012.jpg

ಮಂಗಳೂರಿನ ನಾಗುರಿಯ ಕಂಕನಾಡಿ ಪೊಲೀಸ್ ಠಾಣೆ ಬಳಿ ಆಟೋದಲ್ಲಿ ಸಂಭವಿಸಿದ ಸ್ಟೋಟ ಪ್ರಕರಣಕ್ಕೆ ಸಂಭಧಿಸಿದಂತೆ ಪಟ್ಟಣದ ಸೊಪ್ಪುಗುಡ್ಡೆಯಲ್ಲಿರುವ ಶಾರೀಕ್ ಮನೆ ಮೇಲೆ ಬೆಳ್ಳಂ ಬೆಳಗ್ಗೆ ಪೊಲೀಸರು ದಾಳಿ ಮಾಡಿದ್ದಾರೆ.

ಮಂಗಳೂರು ಕುಕ್ಕರ್ ಬ್ಲಾಸ್ಟ್ ಪ್ರಕರಣದಲ್ಲಿ ಶಾರಿಕ್ ಆರೋಪಿಯಾಗಿರಬಹುದು ಎಂಬ ಕಾರಣಕ್ಕಾಗಿ ಒಟ್ಟು ಮೂರು ತಂಡಗಳಾಗಿ ಪೊಲೀಸರು ದಾಳಿ ನಡೆಸಿದ್ದಾರೆ.

ತೀರ್ಥಹಳ್ಳಿ, ಮಾಳೂರು ಹಾಗೂ ಆಗುಂಬೆ ಪೊಲೀಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ ಗಳು ದಾಳಿಯಲ್ಲಿ ಭಾಗಿಯಾಗಿದ್ದು, ಶಾರೀಕ್ ಚಿಕ್ಕಮ್ಮನ ಮನೆ ಸೇರಿದಂತೆ ಅವರ ಸಂಬಂಧಿಕರ ಒಟ್ಟು ನಾಲ್ಕು ಮನೆಗಳ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ.

ಇನ್ನು ಹಲವು ದಾಖಲೆಗಳನ್ನು ತೀರ್ಥಹಳ್ಳಿ ಪೊಲೀಸರು ವಶಪಡಿಸಿಕೊಂಡಿದ್ದು ಹಲವು ಆಯಾಮಗಳಲ್ಲಿ ತನಿಖೆ ನಡೆಸುತ್ತಿದ್ದಾರೆ.

Leave a Reply

Your email address will not be published. Required fields are marked *

error: Content is protected !!