March 20, 2026

ಮಂಗಳೂರು: ಆಟೋ ರಿಕ್ಷಾದಲ್ಲಿ ಸ್ಫೋಟ ಪ್ರಕರಣ: ಶಂಕಿತ ಆರೋಪಿ ಶಾರೀಕ್ ನ ಗುರುತು ಪತ್ತೆ ಹಚ್ಚಿದ ಕುಟುಂಬಸ್ಥರು

0
image_editor_output_image-969772107-1669014420943

ಮಂಗಳೂರು: ಮಂಗಳೂರಿನ ನಾಗುರಿಯ ಕಂಕನಾಡಿ ಪೊಲೀಸ್ ಠಾಣೆ ಬಳಿ ಆಟೋದಲ್ಲಿ ಸಂಭವಿಸಿದ ಕುಕ್ಕರ್ ಬಾಂಬ್ ಸ್ಫೋಟದಲ್ಲಿ ಗಾಯಗೊಂಡಿರುವ ಶಾರೀಕ್‌‌ನ ಕುಟುಂಬಸ್ಥರು ಶಿವಮೊಗ್ಗದಿಂದ ಮಂಗಳೂರಿನ ಆಸ್ಪತ್ರೆಗೆ ಆಗಮಿಸಿದ್ದಾರೆ.

ಶಂಕಿತ ಶಾರೀಕ್ ಗುರುತು ಪತ್ತೆಗೆ ಶಿವಮೊಗ್ಗದಿಂದ ಮೂವರು ಮಹಿಳೆಯರು ಆಗಮಿಸಿದ್ದು, ಮಹಿಳೆಯಯೊಂದಿಗೆ ಪ್ರಕರಣದ ತನಿಖಾಧಿಕಾರಿಯಾಗಿರುವ ಮಂಗಳೂರು ಕೇಂದ್ರ ಉಪವಿಭಾಗದ ಎಸಿಪಿ ಪರಮೇಶ್ವರ್ ಹೆಗಡೆ ಕೂಡ ಆಗಮಿಸಿದ್ದಾರೆ.

ಆಟೋ ಚಾಲಕ ಪುರುಷೋತ್ತಮ್ ಹಾಗೂ ಶಂಕಿತ ಆರೋಪಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಆಸ್ಪತ್ರೆಗೆ ಭೇಟಿ ನೀಡಿರುವ ಶಾರೀಕ್ ಕುಟುಂಬಸ್ಥರು ಮಂಗಳೂರು ಪೊಲೀಸ್ ಕಮಿಷನರ್ ಎನ್ ಶಶಿಕುಮಾರ್ ಸಮ್ಮುಖದಲ್ಲಿ ಗುರುತು ಪತ್ತೆ ಮಾಡಿದ್ದಾರೆ.

Leave a Reply

Your email address will not be published. Required fields are marked *

error: Content is protected !!