February 4, 2026

ಹಳಿ ತಪ್ಪಿ ಉರುಳಿ ಬಿದ್ದು ಗೂಡ್ಸ್ ರೈಲು: ಇಬ್ಬರು ಮೃತ್ಯು

0
image_editor_output_image88639005-1669019178582.jpg

ಜಾಜ್‌ಪುರ: ಒಡಿಶಾದ ಜಾಜ್‌ಪುರ ಜಿಲ್ಲೆಯ ಕೋರಯಿ ರೈಲು ನಿಲ್ದಾಣದಲ್ಲಿ ಗೂಡ್ಸ್ ರೈಲು ಹಳಿ ತಪ್ಪಿ ಉರುಳಿ ಬಿದ್ದು ಇಬ್ಬರು ಮೃತಪಟ್ಟಿದ್ದಾರೆ ಎಂದು ರೈಲ್ವೆ ಅಧಿಕಾರಿಗಳು ಸೋಮವಾರ ತಿಳಿಸಿದ್ದಾರೆ.

ಘಟನೆಯಲ್ಲಿ ಕೆಲವರು ಗಂಭೀರ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.

ಸೋಮವಾರ ಬೆಳಿಗ್ಗೆ ಸುಮಾರು 6.45ಕ್ಕೆ ಯಾತ್ರಿಕರು ಪ್ರಯಾಣಿಕ ರೈಲಿಗಾಗಿ ಪ್ಲಾಟ್‌ಫಾರ್ಮ್‌ನಲ್ಲಿ ಕಾಯುತ್ತಿದ್ದ ವೇಳೆ ಅವಘಡ ಸಂಭವಿಸಿದೆ ಎಂದು ಪೂರ್ವ ಕರಾವಳಿ ರೈಲ್ವೆ (ಇಸಿಒಆರ್) ಅಧಿಕಾರಿಗಳು ತಿಳಿಸಿದ್ದಾರೆ.

ಡೊಂಗೊಪೋಸಿಯಿಂದ ಛತ್ರಪುರಕ್ಕೆ ಚಲಿಸುತ್ತಿದ್ದ ಗೂಡ್ಸ್ ರೈಲು ಹಳಿ ತಪ್ಪಿ ಪ್ಲಾಟ್‌ಫಾರ್ಮ್‌ಗೆ ಉರುಳಿ ಬಿದ್ದಿದೆ.

ಅವಘಡದ ಹಿಂದಿನ ಕಾರಣ ತಿಳಿದು ಬಂದಿಲ್ಲ. ಅಪಘಾತ ನಡೆದ ಸ್ಥಳಕ್ಕೆ ವೈದ್ಯಕೀಯ ತಂಡವನ್ನು ರವಾನಿಸಲಾಗಿದೆ.

ಅಪಘಾತಕ್ಕೆ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಸಂತಾಪ ಸೂಚಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!