May 17, 2026

ಸ್ಪೈ ಕ್ಯಾಮೆರಾ ಇಟ್ಟು ವಿದ್ಯಾರ್ಥಿನಿಯರ ಅರೆನಗ್ನ ವೀಡಿಯೋ ಚಿತ್ರೀಕರಣ: ವಿದ್ಯಾರ್ಥಿಯ ಬಂಧನ

0
image_editor_output_image-1819607311-1669090407717.jpg

ಬೆಂಗಳೂರು: ವಿದ್ಯಾರ್ಥಿನಿಯರ ಅರೆನಗ್ನ ವೀಡಿಯೋಗಳನ್ನು ಚಿತ್ರೀಕರಣ ಮಾಡುತ್ತಿದ್ದ ವಿದ್ಯಾರ್ಥಿಯನ್ನು ಇದೀಗ ಪೊಲೀಸರು ಬಂಧಿಸಿದ್ದಾರೆ.

ಬಂಧಿತನನ್ನು ಶುಭಂ ಎಂ. ಎಂದು ಗುರುತಿಸಲಾಗಿದೆ. ಈತ ಹೊಸಕೆರೆಹಳ್ಳಿ ಬಳಿಯ ಖಾಸಗಿ ಕಾಲೇಜಿನ ವಿದ್ಯಾರ್ಥಿ.

ಶೌಚಾಲಯದಲ್ಲಿ ರಹಸ್ಯ ಕ್ಯಾಮೆರಾ ಫಿಕ್ಸ್ ಮಾಡಿ ಕೃತ್ಯ ಎಸಗುತ್ತಿದ್ದ. ಹೀಗೆ 1,200 ಕ್ಕೂ ಅಧಿಕ ವೀಡಿಯೋ ಹಾಗೂ ಫೋಟೋ ಚಿತ್ರೀಕರಿಸಿದ್ದಾನೆ. ಸ್ನೇಹಿತೆಯರು ಜೊತೆಯಲ್ಲಿದ್ದಾಗಲೂ ಅವರ ಅರೆನಗ್ನ ಫೋಟೋ ತೆಗೆದಿದ್ದ.

ಇತ್ತೀಚೆಗೆ ಕಾಲೇಜು ಶೌಚಾಲಯದಲ್ಲಿ ಕ್ಯಾಮೆರಾ ಅಳವಡಿಸಲು ಹೋದಾಗ ಯುವತಿಯರು ಚೀರಾಡಿದ್ದಾರೆ. ಈ ವೇಳೆ ಆರೋಪಿ ಪರಾರಿಯಾಗಿದ್ದ. ಬಳಿಕ ಸಿಸಿಟಿವಿ ಪರಿಶೀಲನೆ ವೇಳೆ ಶುಭಂ ಕೃತ್ಯ ಬೆಳಕಿಗೆ ಬಂದಿದೆ. ಈ ಹಿಂದೆಯೂ ಇದೇ ರೀತಿ ಮಾಡಿ ಕ್ಷಮೆಯಾಚನೆ ಬರೆದುಕೊಟ್ಟಿದ್ದ.

Leave a Reply

Your email address will not be published. Required fields are marked *

error: Content is protected !!