ಬ್ರಹ್ಮಾವರ: 108 ಆಂಬುಲೆನ್ಸ್ ನಲ್ಲಿಯೇ ಹೆಣ್ಣು ಮಗುವಿಗೆ ಜನ್ಮ ನೀಡಿದ ಮಹಿಳೆ
ಬ್ರಹ್ಮಾವರ: ಉಡುಪಿಯ ನಿಟ್ಟೂರು ಬಳಿ ಮಹಿಳೆಯೊಬ್ಬರಿಗೆ ಹೆರಿಗೆ ನೋವು ಹೆಚ್ಚಾಗಿದ್ದರಿಂದ 108 ಆಂಬ್ಯುಲೆನ್ಸ್ನಲ್ಲಿಯೇ ಮಗುವಿಗೆ ಜನ್ಮ ನೀಡಿದ ಘಟನೆ ನಡೆದಿದೆ.
ಗರ್ಭಿಣಿ ಸಂಧ್ಯಾ ಅವರು ಹೆರಿಗೆ ನೋವಿನಿಂದ ಬಳಲುತ್ತಿದ್ದು ಆಸ್ಪತ್ರೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ನಲ್ಲಿಯೇ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ.
ಬ್ರಹ್ಮಾವರ ಸಮುದಾಯ ಆರೋಗ್ಯ ಕೇಂದ್ರದಿಂದ, ಆಂಬ್ಯುಲೆನ್ಸ್ ನಲ್ಲಿ ಮೇಲ್ದರ್ಜೆಯ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಉಡುಪಿಗೆ ಸಾಗಿಸುವಾಗ ಮಾರ್ಗ ಮಧ್ಯೆ ನಿಟ್ಟೂರು ಎಂಬಲ್ಲಿ ಹೆಣ್ಣು ಮಗುವಿಗೆ ಮುಂಜಾನೆ 5 ಗಂಟೆ ಸುಮಾರಿಗೆ ಆಂಬುಲೆನ್ಸ್ ನಲ್ಲಿ ಜನ್ಮ ನೀಡಿದ್ದಾರೆ.