ನನ್ನ ಸಾವಿಗೆ ಪಕ್ಷದ ಮುಖಂಡರೇ ಕಾರಣವೆಂದು ವಾಟ್ಸ್ ಆ್ಯಪ್ ಸ್ಟೇಟಸ್ ಹಾಕಿ ಆತ್ಮಹತ್ಯೆಗೆ ಯತ್ನಿಸಿದ ಪಟ್ಟಣ ಪಂಚಾಯತ್ ಸದಸ್ಯೆ
ಚಿಕ್ಕಮಗಳೂರು: ನನ್ನ ಸಾವಿಗೆ ನನ್ನ ಪಕ್ಷದ ಮುಖಂಡರೇ ಕಾರಣವೆಂದು ವಾಟ್ಸಾಪ್ ಸ್ಟೇಟಸ್ ಹಾಕಿ ಪಟ್ಟಣ ಪಂಚಾಯಿತಿ ಸದಸ್ಯೆ ಆತ್ಮಹತ್ಯೆ ಯತ್ನಿಸಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಎನ್.ಆರ್.ಪುರ ತಾಲೂಕಿನಲ್ಲಿ ನಡೆದಿದೆ.
ಜುಬೇದಾ, ಆತ್ಮಹತ್ಯೆಗೆ ಯತ್ನಿಸಿದ ಪಟ್ಟಣ ಪಂಚಾಯಿತಿ ಸದಸ್ಯೆ. ಇವರು ಎನ್.ಆರ್.ಪುರ ತಾಲೂಕಿನ ಮುನ್ಸಿಪಾಲ್ಟಿ ಮೆಂಬರ್ ಆಗಿದ್ದು, ಅಧ್ಯಕ್ಷೆ ಸ್ಥಾನ ಬಿಟ್ಟು ಕೊಡದಿದ್ದಕ್ಕೆ ಮನನೊಂದಿದ್ದಾರೆ.
ಮಾತುಕತೆಯಂತೆ ಪ್ರಸ್ತುತ ಅಧ್ಯಕ್ಷೆ ಸುರಯ್ಯಾ ಭಾನು ಅಧ್ಯಕ್ಷೆ ಅವಧಿ ಮುಗಿದಿದೆ. ಸುರಯ್ಯಾ ಬಾನು, ಅಧ್ಯಕ್ಷೆ ಸ್ಥಾನ ಬಿಟ್ಟುಕೊಡಲು ಮೀನಾಮೇಷ ಎಣಿಸುತ್ತಿದ್ದರು. ಸುರಯ್ಯಾ ಬಾನು ರಾಜೀನಾಮೆಗೆ ಪಕ್ಷದ ಮುಖಂಡರಲ್ಲೇ ಮುಸುಕಿನ ಗುದ್ದಾಟ ನಡೆದಿದ್ದು, ಇದರಿಂದ ಮನನೊಂದು ಜುಬೇದಾ ಆತ್ಮಹತ್ಯೆಗೆ ಯತ್ನಿಸಿದ್ದಾರೆ.





