May 17, 2026

ಪೊಲೀಸರ ಮೇಲೆ ಸಿಮೆಂಟ್ ಇಟ್ಟಿಗೆಯಿಂದ ಹಲ್ಲೆ: ಪರಾರಿಯಾಗಲು ಯತ್ನಿಸಿದ ಆರೋಪಿಗೆ ಗುಂಡೇಟು

0
image_editor_output_image1177516547-1669186411686.jpg

ಬೆಂಗಳೂರು: ಪೊಲೀಸರ ಮೇಲೆ ಸಿಮೆಂಟ್ ಇಟ್ಟಿಗೆಯಿಂದ ಹಲ್ಲೆ ನಡೆಸಿ ಪರಾರಿಯಾಗಲು ಯತ್ನಿಸಿದ ನೆಲಮಂಗಲದ ದರೋಡೆಕೋರ ಯೋಗಾನಂದ ಅಲಿಯಾಸ್ ನೈಟ್ಶಿಫ್ಟ್ ಯೋಗಿ ಎಂಬಾತನ ಕಾಲಿಗೆ ಪೊಲೀಸರು ಗುಂಡು ಹಾರಿಸಿದ್ದಾರೆ.

ಸ್ಥಳ ಮಹಜರು ವೇಳೆ ಆರೋಪಿಯು ಪೊಲೀಸರ ಮೇಲೆ ಹಲ್ಲೆ ನಡೆಸಿದ್ದ. ಈ ವೇಳೆ ಗಾಳಿಯಲ್ಲಿ ಗುಂಡುಹಾರಿಸಿ ಪೊಲೀಸರು ಎಚ್ಚರಿಸಿದರು. ರೌಡಿ ಹೆದರದಿದ್ದಾಗ ಕಾಲಿಗೆ ಗುಂಡು ಹಾರಿಸಿದರು ಎಂದು ಮೂಲಗಳು ಹೇಳಿವೆ. ನೆಲಮಂಗಲದ ದಾನೋಜಿಪಾಳ್ಯ ರಸ್ತೆಯಲ್ಲಿ ಘಟನೆ ನಡೆದಿದೆ.

ಈತ ಕುಖ್ಯಾತ ದರೋಡೆಕೋರನಾಗಿದ್ದ. ಸ್ಥಳ ಮಹಜರು ವೇಳೆ ಪೊಲೀಸರ ಮೇಲೆ ಹಾಲೋಬ್ರಿಕ್ಸ್ನಿಂದ ಪೊಲೀಸರ ಮೇಲೆ ಹಲ್ಲೆ ನಡೆಸಿದ. ಕಾನ್ಸ್‌ಟೆಬಲ್ ಹನುಮಂತ ಹಿಪ್ಪರಗಿ ಅವರ ಕೈಗಳಿಗೆ ಗಾಯವಾಯಿತು.

ಈ ಸಂದರ್ಭದಲ್ಲಿ ನೆಲಮಂಗಲ ಟೌನ್ ಪೊಲೀಸ್ ಇನ್ಸ್ಪೆಕ್ಟರ್ ಶಶಿಧರ್‌ರಿಂದ ಗುಂಡು ಹಾರಿಸಿದರು. ಆರೋಪಿಯ ಮೇಲೆ 18 ಪ್ರಕರಣಗಳಿವೆ.

Leave a Reply

Your email address will not be published. Required fields are marked *

error: Content is protected !!