February 4, 2026

ಮೈಸೂರು ಹುಲಿ ಟಿಪ್ಪು ಸುಲ್ತಾನರ ಬಗ್ಗೆ ಅಪಪ್ರಚಾರ: “ಟಿಪ್ಪು ನಿಜ ಕನಸುಗಳು” ಪುಸ್ತಕ ಮಾರಾಟಕ್ಕೆ ಕೋರ್ಟ್ ತಡೆಯಾಜ್ಞೆ

0
image_editor_output_image1052304970-1669187853029.jpg

ಬೆಂಗಳೂರು: ಮೈಸೂರು ರಂಗಾಯಣದ ನಿರ್ದೇಶಕ ಅಡ್ಡಂಡ ಸಿ ಕಾರ್ಯಪ್ಪ ರಚಿಸಿದ ಟಿಪ್ಪು ನಿಜ ಕನಸುಗಳು ಪುಸ್ತಕ ಮಾರಾಟಕ್ಕೆ ಸಿಟಿ ಸಿವಿಲ್‌ ಕೋರ್ಟ್‌ ತಾತ್ಕಾಲಿಕ ತಡೆಯಾಜ್ಞೆ ವಿಧಿಸಿದೆ.

ಟಿಪ್ಪು ನಾಟಕ ಪ್ರದರ್ಶನಕ್ಕೆ‌ ಯಾವುದೇ ಅಡ್ಡಿ ಇಲ್ಲ. ನಾಟಕ ಪ್ರದರ್ಶನಕ್ಕೆ ತಡೆ ನೀಡಲಾಗುವುದಿಲ್ಲ ಎಂದು ಕೋರ್ಟ್‌ ಹೇಳಿದೆ.

ಪುಸ್ತಕವು ಕೋಮು, ಶಾಂತಿ ಮತ್ತು ಸೌಹಾರ್ದಕ್ಕೆ ಧಕ್ಕೆ ಉಂಟು ಮಾಡುವ ಸಾಧ್ಯತೆ ಇದೆ. ಪುಸ್ತಕ ಸುಳ್ಳುಗಳಿಂದ ತುಂಬಿದೆ. ಲೇಖಕರು ಹೇಳಿದ ವಿಷಯಗಳಿಗೆ ಯಾವುದೇ ದಾಖಲೆಗಳನ್ನು ಒದಗಿಸಿಲ್ಲ.

ಸಾರ್ವಜನಿಕ ಶಾಂತಿಗೆ ಭಂಗ ಉಂಟು ಮಾಡುವ ಅಪಾಯವಿದೆ. ಹೀಗಾಗಿ ಎಲ್ಲಿಯೂ ಮಾರಾಟಕ್ಕೆ ಅನುಮತಿ ನೀಡಬಾರದು ಎಂದು ಬೆಂಗಳೂರು ಜಿಲ್ಲಾ ವಕ್ಫ್‌ ಮಂಡಳಿಯ ಮಾಜಿ ಅಧ್ಯಕ್ಷ ರಫೀಉಲ್ಲಾ ಅರ್ಜಿಯಲ್ಲಿ ಮನವಿ ಮಾಡಿದ್ದರು.

Leave a Reply

Your email address will not be published. Required fields are marked *

You may have missed

error: Content is protected !!