ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಕ್ರಿಕೆಟಿಗ ಕೆ.ಎಲ್. ರಾಹುಲ್
ಭೇಟಿ
ಸುಬ್ರಹ್ಮಣ್ಯ: ಭಾರತ ಅಂತರಾಷ್ಟ್ರೀಯ ಕ್ರಿಕೇಟ್ ತಂಡದ ಆಟಗಾರ, ತಂಡದ ಉಪನಾಯಕ ಮಂಗಳೂರು ಮೂಲದ ಕೆ.ಎಲ್. ರಾಹುಲ್ ಇಂದು ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಭೇಟಿ ನೀಡಿ, ದೇವರ ದರ್ಶನ ಪಡೆದರು.
ಕ್ಷೇತ್ರಕ್ಕೆ ಸ್ನೇಹಿತರೊಂದಿಗೆ ಭೇಟಿ ನೀಡಿದ ಅವರು ಶ್ರೀ ದೇವರ ದರುಶನ ಪಡೆದು, ಪ್ರಾರ್ಥನೆ ಸಲ್ಲಿಸಿ ಪ್ರಸಾದ ಸ್ವೀಕರಿಸಿದರು. ಬಳಿಕ ದೇವಳದ ವತಿಯಿಂದ ಕೆ.ಎಲ್. ರಾಹುಲ್ ಅವರನ್ನು ಬರಮಾಡಿಕೊಳ್ಳಲಾಯಿತು.
ಇನ್ನು ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಮೋಹನ್ ರಾಂ ಮತ್ತಿತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದು, ಕೆ.ಎಲ್. ರಾಹುಲ್ ಅವರನ್ನು ಗೌರವಿಸಿದರು.





