ಮಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಆರೋಗ್ಯ ವಿಚಾರಿಸಿದ ಗೃಹಸಚಿವ
ಮಂಗಳೂರು: ಮಂಗಳೂರಿಗೆ ಇಂದು ಭೇಟಿ ನೀಡಿದ ಗೃಹ ಸಚಿವ ಅರಗ ಜ್ಞಾನೇಂದ್ರ ಅವರು ಸಂಸದ,ಬಿಜೆಪಿ ರಾಜ್ಯಾಧ್ಯಕ್ಷರಾದ ನಳಿನ್ ಕುಮಾರ್ ಕಟೀಲ್ ಅವರನ್ನು ಆಸ್ಪತ್ರೆಯಲ್ಲಿ ಭೇಟಿಯಾಗಿ ಆರೋಗ್ಯ ವಿಚಾರಿಸಿ,ಶೀಘ್ರ ಗುಣಮುಖರಾಗುವಂತೆ ಹಾರೈಸಿದರು.
ಈ ಸಂದರ್ಭ ಶಾಸಕ ವೇದವ್ಯಾಸ ಕಾಮತ್,ಕಾರ್ಪೋರೇಟರ್ ಮನೋಹರ್ ಕದ್ರಿ,ಬಿಜೆಪಿ ಮುಖಂಡರುಗಳಾದ ಸಂತೋಷ್ ಕುಮಾರ್ ಬೋಳಿಯಾರ್, ಜಗದೀಶ ಶೇಣವ,ಚರಿತ್ ಪೂಜಾರಿ ಮತ್ತಿತರರು ಜೊತೆಗಿದ್ದರು





